ಮಹದಾಯಿ ವಿಚಾರಕ್ಕೆ ಮೌನ ಮುರಿದ ಪ್ರಧಾನಿ ಮೋದಿಯವರಿಗೆ ಟ್ವೀಟರ್ ಮೂಲಕ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು;ಮೇ-5: ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿಯಿಲ್ಲ. ರೈತರ ದಯನೀಯ ಸ್ಥಿತಿಗೆ ಕಾಂಗ್ರೆಸ್ಸೇ ಕಾರಣ ಎಂದು ವಾಗ್ದಾಳಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ರೈತರ ಬಗೆಗಿನ ನಿಮ್ಮ ಕಾಳಜಿ ನಿಜವಾ? ಅಥವಾ ಇದೊಂದು ಚುನಾವಣಾ ಗಿಮಿಕ್ಕಾ.. ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾನ ಟ್ವೀಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ, ಕೊನೆಗೂ ಮಹದಾಯಿ ವಿಚಾರವಾಗಿ ಮೌನ ಮುರಿದಿದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ. ಇನ್ನು ರೈತರ ಬಗೆಗಿನ ನಿಮ್ಮ ಕಾಳಜಿ ನಿಜವಾ? ಅಥವಾ ಇದೊಂದು ಚುನಾವಣಾ ಗಿಮಿಕ್‌ ಎಂದು ಪ್ರಶ್ನಿಸಿದ್ದಾರೆ. ಗೋವಾ, ಮಹಾರಾಷ್ಟ್ರ, ಕರ್ನಾಟಕ ಸಿಎಂಗಳನ್ನ ಕರೆಯಬೇಕಿತ್ತು. ಮೂರು ರಾಜ್ಯಗಳ ಮುಖ್ಯಮಂತ್ರಿಗಳನ್ನ ಮಾತುಕತೆಗೆ ಕರೆಯಬೇಕಾಗಿತ್ತು ಎಂದು ಎದಿರೇಟು ನೀಡಿದ್ದಾರೆ.

ಗದಗದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ ಎರಡು ರಾಜ್ಯಗಳ ಮಧ್ಯೆ ಮಹದಾಯಿ ಗೊಂದಲ ಉದ್ಭವವಾಗಲು ಕಾರಣವಾಗಿದ್ದು ಕಾಂಗ್ರೆಸ್‌ ಪಕ್ಷದ ನಿರ್ಧಾರ. 2007ರಲ್ಲಿ ಗೋವಾ ಜನರ ಮನವೊಲಿಸುವ ಉದ್ದೇಶದಿಂದ ಸೋನಿಯಾ ಗಾಂಧಿ ಕರ್ನಾಟಕದ ಜನರಿಗೆ ಮೋಸ ಮಾಡಿದರು ಎಂದು ವಾಗ್ದಾಳಿ ನಡೆಸಿದ್ದರು.

Karnataka assembly election,PM Modi,Mahadai Rever,CM Siddaramaiah

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ