ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಪೊಲಿಸ್ ವಾಹನ ಅಪಘಾತ: ಸಿಐಡಿ ಡಿವೈಎಸ್​ಪಿ ಬಾಳೇಗೌಡ,ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಂಶಿಕೃಷ್ಣ ಸೇರಿ ಮೂವರು ಪೊಲೀಸರು ಸಾವು

ಬಾಗಲಕೋಟೆ:ಮೇ-೧೦: ಲಾರಿ ಮತ್ತು ಪೊಲೀಸ್​ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಸಂಗಮ ಕ್ರಾಸ್ ಬಳಿ ನಡೆದಿದೆ.

ಚುನಾವಣಾ ಕರ್ತವ್ಯಕ್ಕಾಗಿ ತೆರಳುತ್ತಿದ್ದ ವೇಳೆ ತಡರಾತ್ರಿ ಈ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಬೆಂಗಳೂರಿನ ಸಿಐಡಿ ಡಿವೈಎಸ್​ಪಿ ಬಾಳೇಗೌಡ, ಸಿಪಿಐ ಶಿವಸ್ವಾಮಿ, ಪೊಲೀಸ್​ ವಾಹನ ಚಾಲಕ ವೇಣುಗೋಪಾಲ್​ ಸ್ಥಳದಲ್ಲೇ ಮೃತಪಟ್ಟಿದ್ಧಾರೆ.

ಬಾಳೇಗೌಡ ಅವರು ಚುನಾವಣೆ ಕರ್ತವ್ಯಕ್ಕಾಗಿ ಜಿಲ್ಲೆಗೆ ಆಗಮಿಸಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಂಶಿಕೃಷ್ಣ, ಡಿವೈಎಸ್​ಪಿ ಗಿರೀಶ್​ ಸೇರಿದಂತೆ ಪೊಲೀಸರು ತೆರಳಿದ್ದು, ತನಿಖೆ ನಡೆಸುತ್ತಿದ್ದಾರೆ.
Bagalkot, Accident, police officers, CID DYSP balegowda Killed

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ