ಹಲವು ರಾಜಕೀಯ ನಾಯಕರ ಮತದಾನ:

ರಾಮನಗರ, ಮೇ 12- ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ರಾಜಕೀಯ ನಾಯಕರು ಇಂದು ಮತದಾನ ಮಾಡಿದರು.
ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೇತಗಾನಹಳ್ಳಿಯ ಮತಗಟ್ಟೆಯಲ್ಲಿ ಕುಮಾರಸ್ವಾಮಿ ಕುಟುಂಬ ಸಮೇತ ಮತ ಚಲಾಯಿಸಿದರು.
ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅವರು ಕನಕಪುರ ವಿಧಾನಸಭಾ ಕ್ಷೇತ್ರದ ದೊಡ್ಡಾಲಹಳ್ಳಿ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣ ಕ್ಷೇತ್ರದ ಚೆಕ್ಕೆರೆ ಗ್ರಾಮದಲ್ಲಿ ಮತದಾನ ಮಾಡಿದರು.
ಮಾಜಿ ಶಾಸಕ ಹಾಗೂ ಮಾಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ.ಬಾಲಕೃಷ್ಣ ಮಾಗಡಿ ತಾಲ್ಲೂಕಿನ ಹುಲಿಕಟ್ಟೆ ಗ್ರಾಮದಲ್ಲಿ ಮತದಾನ ಮಾಡಿದರು.
ಮಾಗಡಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎ.ಮಂಜು ಬಿಡದಿ ಪಟ್ಟಣದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ