ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಪ್ರಕಟ: ಜೂನ್ 8ರಂದು ಮತದಾನ

ಬೆಂಗಳೂರು:ಮೇ-13: ರಾಜ್ಯ ವಿಧಾನಸಭಾ ಚುನಾವಣೆ ಮುಕ್ತಾಯವಾಗಿದ್ದು, ಇದರ ಬೆನ್ನಲ್ಲೇ ವಿಧಾನ ಪರಿಷತ್ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ.

ಕೇಂದ್ರ ಚುನಾವಣಾ ಆಯೋಗವು ರಾಜ್ಯದ ಆರು ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಘೊಷಣೆ ಮಾಡಿದ್ದು, ಜೂನ್ 8ರಂದು ಮತದಾನ ನಡೆಯಲಿರುವುದಾಗಿ ಮಾಹಿತಿ ನೀಡಿದೆ.

ಕರ್ನಾಟಕ ಆಗ್ನೇಯ ಶಿಕ್ಷಕರ ಮತಕ್ಷೇತ್ರ, ದಕ್ಷಿಣ ಶಿಕ್ಷಕರ ಮತಕ್ಷೇತ್ರ, ನೈಋತ್ಯ ಶಿಕ್ಷಕರ ಮತಕ್ಷೇತ್ರ, ನೈಋತ್ಯ ಪದವೀಧರ ಮತಕ್ಷೇತ್ರ, ಬೆಂಗಳೂರು ಪದವೀಧರ ಮತಕ್ಷೇತ್ರ ಹಾಗೂ ಈಶಾನ್ಯ ಪದವೀಧರ ಮತಕ್ಷೇತ್ರಗಳಿಗೆ ಜೂನ್ 8ರಂದು ಮತದಾನ ನಡೆಯಲಿದೆ.

ಇನ್ನು ನಾಮಪತ್ರ ಸಲ್ಲಿಕೆಗೆ ಮೇ 22 ಅಂತಿಮ ದಿನವಾಗಿದ್ದು, ಮೇ 23ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಂತೆಯೇ ಮೇ 25ರೊಳಗೆ ನಾಮಪತ್ರ ವಾಪಸ್ ಪಡೆಯಬಹುದು.

ಜೂನ್ 8ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಜೂನ್ 12ರಂದು ಮತ ಎಣಿಕೆ ನಡೆಯಲಿದೆ. ಜೂನ್ 15ರೊಳಗೆ ಚುನಾವಣೆಯ ಸಂಪೂರ್ಣ ಪ್ರಕ್ರಿಯೆ ಕೊನೆಗೊಳ್ಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.

Legislative Council Election 2018, Karnataka,Election Commission announced

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ