ರಾಜ್ಯ ರಾಜಕೀಯ ಬೆಳವಣಿಗೆಗಳ ವೀಕ್ಷಣೆಗೆ ಇಬ್ಬರು ಸಚಿವರನ್ನು ನೇಮಕ ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು:ಮೇ-16; ರಾಜ್ಯದಲ್ಲಿ ಅತಂತ್ರ ವಿಧಾನಸಭೆ ರಚನೆಯಾದ ಹಿನ್ನಲೆಯಲ್ಲಿ ರಾಜ್ಯಪಾಲ ವಜುಬಾಯಿ ವಾಲ ಅವರ ನಡೆ ಈಗ ತೀವ್ರ ಕುತೂಹಲ ಮೂಡಿಸಿದ್ದು, ಈ ನಡುವೆ ಕೇಂದ್ರದ ಎನ್’ಡಿಎ ಸರ್ಕಾರ ಕರ್ನಾಟಕದ ಬಿಜೆಪಿ ಪರಿವೀಕ್ಷಕರಾಗಿ ಇಬ್ಬರು ಕೇಂದ್ರ ಸಚಿವರನ್ನು ನೇಮಕ ಮಾಡಿದೆ.

ರಾಜ್ಯ ರಾಜಕೀಯದಲ್ಲಿ ಆಗುತ್ತಿರುವ ಬೆಳವಣಿಗೆಗಳು ಹಾಗೂ ಆಗುಹೋಗುಗಳನ್ನು ಪರಿಶೀಲಿಸಲು ರಾಜ್ಯ ಬಿಜೆಪಿ ಪರಿವೀಕ್ಷಕರಾಗಿ ಎನ್’ಡಿಎ ಪಕ್ಷ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಅವರನ್ನು ನೇಮಕ ಮಾಡಿದೆ.

ಅತಂತ್ರ ಸ್ಥಿತಿ ಹಿನ್ನಲೆಯಲ್ಲಿ ಸರ್ಕಾರ ರಚಿಸಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ತಂತ್ರಗಳನ್ನು ರೂಪಿಸಲು ಆರಂಭಿಸಿವೆ. ಇದರಂತೆ ಬಿಜೆಪಿ ಇಂದು ಪಕ್ಷದ ಸಭೆಯನ್ನು ನಗರದಲ್ಲಿ ಆಯೋಜನೆ ಮಾಡಿದ್ದು, ಇಂದು ಬೆಳಿಗ್ಗೆ 11 ಗಂಟೆಗೆ ಸಭೆ ಆರಂಭವಾಗಿದೆ. ಸಭೆಯಲ್ಲಿಕ ಬಿಜೆಪಿ ಉನ್ನತ ನಾಯಕರು ಭಾಗಿಯಾಗಿದ್ದು, ಚುನಾವಣಾ ಫಲಿತಾಂಶ ಕುರಿತು ಚರ್ಚೆ ನಡೆಸಿದ್ದಾರೆ. ಸಭೆ ಬಳಿಕ ಬಿಜೆಪಿ ನಾಯಕರು ಮತ್ತೆ ರಾಜ್ಯಪಾಲರನ್ನು ಭೇಟಿಯಾಗುವ ಸಾಧ್ಯತೆಯಿದೆ.

Karnataka assembly election,BJP observers, Dharmendra Pradhan, JP Nadda

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ