ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಅವರ ವ್ಯಾಪಾರಿ ಪಾಲುದಾರರ ನಿವಾಸ ಹಾಗೂ ಕಚೇರಿಗಳ ಮೇಲೆ ಸಿಬಿಐ ದಾಳಿ

 

ಬೆಂಗಳೂರು, ಮೇ 31- ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಅವರ ವ್ಯಾಪಾರಿ ಪಾಲುದಾರರ ನಿವಾಸ ಹಾಗೂ ಕಚೇರಿಗಳ ಮೇಲೆ ಸಿಬಿಐನವರು ದಾಳಿ ನಡೆಸಿ ದೊಡ್ಡ ಶಾಕ್ ನೀಡಿದ್ದಾರೆ.
2016ರ ನೋಟ್‍ಬ್ಯಾನ್ ವೇಳೆ ರಾಮನಗರದಲ್ಲಿ ಅಕ್ರಮ ನಡೆದಿರುವ ಸಂಬಂಧ ಸಿಬಿಐ ಅಧಿಕಾರಿಗಳು ಸಿಬಿಐ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಡಿಕೆಶಿ ಆಪ್ತರೆನ್ನಲಾದ 11 ಜನರ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ಡಿಕೆಶಿ ಅವರ ಆಪ್ತರು, ನೆಂಟರಿಸ್ಟರು, ಬೆಂಬಲಿಗರ ಮನೆಗಳ ಮೇಲೆ ಈ ದಾಳಿ ನಡೆದಿದೆ. ಬೆಂಗಳೂರು, ಕನಕಪುರ, ರಾಮನಗರ ಮುಂತಾದ ಕಡೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ರಾಮನಗರದ ಕಾಪೆರ್Çರೇಷನ್ ಬ್ಯಾಂಕ್‍ನಲ್ಲಿ 2016ರಲ್ಲಿ ನೋಟ್‍ಬ್ಯಾನ್ ಸಂದರ್ಭದಲ್ಲಿ ಹಳೆಯ ನೋಟುಗಳ ಬದಲಾವಣೆ ಸಂಬಂಧ ಅಕ್ರಮ ವಹಿವಾಟು ನಡೆದಿರುವ ವಿಷಯಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎನ್ನಲಾಗಿದೆ.
ದೆಹಲಿ, ಮುಂಬೈ ಸೇರಿದಂತೆ ವಿವಿಧೆಡೆಗಳಿಂದ ಬಂದಿದ್ದ ಸಿಬಿಐನ ಹಿರಿಯ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದು, ಹಲವು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ದಾಳಿಯ ಮುನ್ಸೂಚನೆ ಸಿಗುತ್ತಿದ್ದಂತೆ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಅವರು ಇಂದು ಬೆಳ್ಳಂಬೆಳಗ್ಗೆ ಪತ್ರಿಕಾಗೋಷ್ಠಿ ನಡೆಸಿ ರಾಜಕೀಯ ದುರುದ್ದೇಶಿತ ಪೂರಕ ದಾಳಿ ಎಂದು ಆರೋಪಿಸಿದ್ದರು.
ರಾಜಕೀಯವಾಗಿ ನಮ್ಮನ್ನು ತೇಜೋವಧೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಅವರು ಈ ತಂತ್ರ ಹೆಣೆದಿದ್ದಾರೆ. ನಾವು ಕಾನೂನು ಹೋರಾಟದ ಮೂಲಕ ಇದಕ್ಕೆ ಉತ್ತರ ಕೊಡುತ್ತೇವೆ ಎಂದು ಹೇಳಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ