ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಮೆಡಿಕಲ್‍ಶಾಪ್‍ನಲ್ಲಿ ಬೆಂಕಿ, ಲಕ್ಷಾಂತರ ರೂ. ನಷ್ಟ

ಕೋಲಾರ,ಮೇ 31- ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಮೆಡಿಕಲ್‍ಶಾಪ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ಟೌನ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಿನ್ನೆ ಸಂಜೆ ಗುಡುಗು-ಮಿಂಚು ಸಹಿತ ಮಳೆಯಾಗಿರುವುದರಿಂದ ವಿದ್ಯುತ್‍ನ್ನು ಸ್ಥಗಿತಗೊಳಿಸಲಾಗಿತ್ತು. ಇಂದು ಮುಂಜಾನೆ ವಿದ್ಯುತ್ ಸಂಪರ್ಕವನ್ನು ನೀಡಿದ್ದಾರೆ.
ಈ ವೇಳೆ ನಗರದ ಮಹಾತ್ಮಗಾಂಧಿ ರಸ್ತೆಯಲ್ಲಿರುವ ವರ್ಷ ಮೆಡಿಕಲ್ ಶಾಪ್‍ನಲ್ಲಿ ಬೆಳಗ್ಗೆ 5.30ರಲ್ಲಿ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸಾರ್ವಜನಿಕರು ಪೆÇಲೀಸರಿಗೆ ಮಾಹಿತಿ ನೀಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಅಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಬಂದು ರೋಲಿಂಗ್ ಶೆಟರ್‍ನ್ನು ಕತ್ತರಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಗ್ನಿಶಾಮಕ ಠಾಣಾಧಿಕಾರಿ ಮಹದೇಶ್, ಉಲ್ಲಪ್ಪ ಮೇಟಿ,ಇಲಾವರಸ್ ಸಾಬ್, ಶಂಕರಯ್ಯ ಮಠಪತಿ, ಬಸವರಾಜ್ ಸೇರಿದಂತೆ ಮತ್ತಿತರ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದರು.
ಈ ಸಂಬಂಧ ಟೌನ್‍ಹಾಲ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ