ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಆಗ್ರಹಿಸಿ ಪ್ರತಿಭಟನೆ

ಶಿರಸಿ:

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿರಸಿ ಶಾಖೆಯಿಂದ ರಾಜ್ಯದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿ ಶಿರಸಿಯ ನೀಲೇಕಣೆ ವೃತ್ತದಲ್ಲಿ ರಸ್ತೆ ತಡೆದು ರಾಜ್ಯ ಸರ್ಕಾರದ ವಿರುದ್ಧ ಉಗ್ರವಾದ ಪ್ರತಿಭಟನೆ ಮಾಡಲಾಯಿತು. ನಂತರ ತಹಶೀಲ್ದಾರ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಭಾಗ ಸಂಘಟನಾ ಕಾರ್ಯದರ್ಶಿ ಸಿದ್ದು ಮದರಕಂಡಿ ಮಾತನಾಡಿ ಹಿಂದಿನ ರಾಜ್ಯ ಸರ್ಕಾರವು ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಅನುಕೂಲಕರವಾಗಿದೆ. ಆದರೆ ಇಂದಿನ ರಾಜ್ಯ ಸರ್ಕಾರ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ರಾಜ್ಯದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ಪಾಸ್ ನೀಡುವುದಾಗಿ ಹೇಳಿತ್ತು.

2018-19ನೇ ಸಾಲಿನ ಬಜೆಟಿನಲ್ಲಿ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ಪಾಸ್ ನೀಡಲಾಗುತ್ತದೆ ಎಂದು ಘೋಷಿಸಲಾಗಿತ್ತು. ಆದರೆ ಇಂದಿನ ರಾಜ್ಯ ಸರ್ಕಾರ ತಮ್ಮ ಪ್ರಣಾಳಿಕೆಯಲ್ಲಿ ಹೇಳಿದಂತೆ ನಡೆದುಕೊಳ್ಳದೆ, ಹಿಂದಿನ ಬಜೆಟ್ ವಿರುದ್ಧವಾಗಿ ವಿದ್ಯಾರ್ಥಿ ವಿರೋಧಿ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೇ ರಾಜ್ಯದಲ್ಲಿ ಬಸ್ ಪಾಸ್ ಪಡೆಯುತ್ತಿರುವ ವಿದ್ಯಾರ್ಥಿಗಗಳು ಗ್ರಾಮೀಣ ಪ್ರದೇಶದವರೇ ಹೆಚ್ಚೂ, ಆದ್ದರಿಂದ ರಾಜ್ಯದಲ್ಲಿನ ಎಲ್ಲಾ ವರ್ಗದ, ಎಲ್ಲಾ ಸ್ತರದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಹಾಗೂ ಈಗಾಗಲೇ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು ಕೆಲವೊಂದು ಜಿಲ್ಲೆಗಳಲ್ಲಿ ಇನ್ನೂ ಬಸ್ ಪಾಸ್ ವಿತರಣೆಯಾಗುತ್ತಿಲ್ಲ. ಆದ್ದರಿಂದ ಬಸ್ ಪಾಸ್ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರದ ಮುಖ್ಯ ಮಂತ್ರಿಗಳಿಗೆ ಆಗ್ರಹಿಸಿದರು. ಒಂದು ವೇಳೆ ಈ ಸಮಸ್ಯೆಯನ್ನು ಬಗೆಹರಿಸದಿದ್ದರೆ ಉಗ್ರವಾದ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು.

ಈ ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ್ ಗಣಪತಿ ತೇತಿ ರಾಜ್ಯಕಾರ್ಯಕಾರಿಣಿ ಸದಸ್ಯ ಶೋಭಾ ಗೌಡರ್ ತಾಲೂಕಾ ಎಸ್.ಎಫ್.ಡಿ ಪ್ರಮುಖ್ ನಂದನ್ ಶೇಟ್, ಕಾರ್ಯಕರ್ತರಾದ ಶ್ರೀಧರ ನಾಯ್ಕ, ಹೇಮಂತ ಜೋಗಳೇಕರ್, ರಾಧಾ ಪೂಜಾರಿ, ಸುಮನಾ ನಾಯ್ಕ, ಭವ್ಯಾ ಗೌಡಾ, ಚಂದ್ರಕಲಾ ಬಡಗಿ, ತನುಜಾ ಗೌಡ, ಯಮುನಾ ಮರಾಠಿ, ಚೈತ್ರಾ, ಅಕ್ಷತಾ, ಕೀರ್ತಿ ಹಾಗೂ ನೀಲೆಕಣಿ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಿದರು

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ