ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ:ಜೂ-11; ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಬಹು ದಿನಗಳಿಂದ ವಾಜಪೇಯಿಯವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಅವರನ್ನು ದೆಹಲಿಯ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಿರುವುದಾಗಿ ವರದಿಗಳು ತಿಳಿಸಿವೆ.

ದೈನಂದಿನ ತಪಾಸಣೆಗಾಗಿ ವಾಜಪೇಯಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಡಾ.ರಣ್’ದೀಪ್ ಗುಲಾರಿಯಾ ಅವರು ವಾಜಪೇಯಿಯವರ ಆರೋಗ್ಯದ ಬಗ್ಗೆ ನಿಗಾವಹಿಸಿದ್ದಾರೆಂದು ಹೇಳಲಾಗುತ್ತಿದೆ.

Former Prime Minister Atal Bihari Vajpayee, admitted,AIIMS

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ