ನೀತಿ ಆಯೋಗ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು…?

The Prime Minister, Shri Narendra Modi chairing a high-level meeting on the global economic scenario, in New Delhi on September 08, 2015.

ನವದೆಹಲಿ:ಜೂ-17:ದೇಶದ ಆರ್ಥಿಕ ಬೆಳವಣಿಗೆ ದರವನ್ನು ಎರಡಂಕಿಗೆ ಕೊಂಡೊಯ್ಯಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನೀತಿ ಆಯೋಗದ ಆಡಳಿತ ಮಂಡಳಿಯ ನಾಲ್ಕನೇ ಸಭೆಯನ್ನುದ್ದೇಶಿ ಮಾತನಾಡಿದ ಅವರು, ನೆರೆ ಪೀಡಿತ ರಾಜ್ಯಗಳಿಗೆ ಪ್ರಧಾನ್ಯತೆ ನೀಡಿ ಮಾತನಾಡಿದರು. ಪ್ರವಾಹ ಪೀಡಿತ ರಾಜ್ಯಗಳಲ್ಲಿನ ಪರಿಸ್ಥಿತಿ ನಿಭಾಯಿಸಲು ಬೇಕಾದ ಸಂಪೂರ್ಣ ಸಹಕಾರವನ್ನು ಕೇಂದ್ರ ಸರ್ಕಾರ ನೀಡುವುದಾಗಿ ಭರವಸೆ ನೀಡಿದರು.

ಈಶಾನ್ಯ ರಾಜ್ಯಗಳಾದ ತ್ರಿಪುರಾ, ಅಸ್ಸಾಂ, ಮಿಜೋರಂ ಮತ್ತು ಮಣಿಪುರಗಳು ಕಳೆದ ಕೆಲ ದಿನಗಳಿಂದ ಪ್ರವಾಹಕ್ಕೆ ತೀವ್ರ ತೊಂದರೆಗೊಳಗಾಗಿವೆ ಎಂದರು.

ರಾಜ್ಯಗಳ ಮುಖ್ಯಮಂತ್ರಿಗಳು ನೀತಿ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು ಉಪ ಗುಂಪುಗಳು ಮತ್ತು ಸಮಿತಿಗಳ ಮೂಲಕ ಸ್ವಚ್ಛ ಭಾರತ್ ಅಭಿಯಾನ, ಡಿಜಿಟಲ್ ಇಂಡಿಯಾ ಮತ್ತು ಕೌಶಲ್ಯಾಭಿವೃದ್ಧಿಯಂತಹ ವಿಷಯಗಳನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ. ಇನ್ನು 2017-18ನೇ ಸಾಲಿನ ನಾಲ್ಕನೇ ತ್ರೈಮಾಸಿಕದಲ್ಲಿ ಆರ್ಥಿಕ ಬೆಳವಣಿಗೆ ದರ ಶೇಕಡ 7.7 ಇತ್ತು ಎಂದು ನೆನಪಿಸಿದ ಪ್ರಧಾನಿ, ಈ ದರ 2020ರ ವೇಳೆಗೆ ಎರಡಂಕಿಗೆ ಏರಲು ಶ್ರಮಿಸಬೇಕಿದೆ ಎಂದು ಹೇಳಿದರು.

ನೀತಿ ಆಯೋಗದ ಆಡಳಿತ ಮಂಡಳಿಯು ರಾಜ್ಯ ಸರ್ಕಾರಗಳನ್ನು ಒಳಗೊಂಡ ‘ಟೀಮ್‌ ಇಂಡಿಯಾ’ವನ್ನು ಮುನ್ನಡೆಸುತ್ತ, ಅವುಗಳ ನಡುವಿನ ಸಂಕೀರ್ಣ ಸಮಸ್ಯೆಗಳನ್ನು ಸಹಕಾರ, ಒಕ್ಕೂಟ ವ್ಯವಸ್ಥೆ ನೆಲೆಯಲ್ಲಿ ಪರಿಹರಿಸಲಿದೆ ಎಂದರು.

ಪ್ರಸ್ತುತ ಹಣಕಾಸಿನ ವರ್ಷದಲ್ಲಿ ರಾಜ್ಯಗಳು 11 ಲಕ್ಷ ಕೋಟಿಗಿಂತ ಹೆಚ್ಚಿನ ಅನುದಾನವನ್ನು ಕೇಂದ್ರ ಸರ್ಕಾರದಿಂದ ಪಡೆಯಲಿವೆ. ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಈ ಮೊತ್ತ ಸುಮಾರು 5 ಲಕ್ಷ ಕೋಟಿಯಷ್ಟಿತ್ತು ಎಂದು ಮಾಹಿತಿ ನೀಡಿದರು.

ರೈತರ ಆದಾಯ ದ್ವಿಗುಣಗೊಳಿಸುವಿಕೆ, ಜಿಲ್ಲೆಗಳ ಅಭಿವೃದ್ಧಿ, ಅಪೌಷ್ಠಿಕತೆ ನಿವಾರಣೆ, ಆಯುಷ್ಮಾನ್ ಭಾರತ್, ಮಿಷನ್‌ ಇಂಧ್ರಧನುಷ್‌ ಯೋಜನೆ ಜಾರಿ ಮತ್ತು ಗಾಂಧೀಜಿಯವರ 150ನೇ ಜನ್ಮದಿನ ಆಚರಣೆಯ ವಿಷಯಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಕೇಂದ್ರ ಸಚಿವರುಗಳು, ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ ಗಳು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Niti Aayog Meet,Prime Minister Narendra Modi,Chief Ministers

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ