ಹಜ್ ಭವನಕ್ಕೆ ಟಿಪ್ಪು ಹೆಸರಿತ್ಟರೆ ರಾಜ್ಯ ಹೊತ್ತಿ ಉರಿಯುತ್ತದೆ: ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಎಚ್ಚರಿಕೆ

ಬೆಂಗಳೂರು:ಜೂ-23: ಹಜ್ ಭವನಕ್ಕೆ ಟಿಪ್ಪು ಹೆಸರಿಟ್ಟರೆ‌ ರಾಜ್ಯ ಹೊತ್ತಿ‌ ಉರಿಯಲು ಕಾರಣವಾಗುತ್ತದೆ ಎಂದು ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇದ್ದಾಗ ಹಜ್ ಯಾತ್ರಿಕರಿಗೆ ಅನುಕೂಲ‌ ಆಗಲಿ ಎಂದು ಹಣ ಕೊಡಲಾಗಿತ್ತೇ ಹೊರತು ಟಿಪ್ಪು ಹೆಸರು ಇಡಲು ಅಲ್ಲ ಎಂದು ತಿರುಗೇಟು ನೀಡಿದರು.

ಟಿಪ್ಪು ಕೊಡಗು ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು ದೇವಸ್ಥಾನ ಹಾಳು ಮಾಡಿ, 80 ಸಾವಿರಕ್ಕೂ ಹೆಚ್ಚು ಜನರನ್ನು ಕೊಲೆ ಮಾಡಿದ್ದಾನೆ ಎಂದು ದೂರಿದರು. ಟಿಪ್ಪು ಹೆಸರಿಡುವ ನಿರ್ಧಾರ ಮಾಡಿದರೆ ಕೊಡಗು ಜಿಲ್ಲೆಯಲ್ಲಿ ತೀವ್ರ ಹೋರಾಟ ಮಾಡುತ್ತೇವೆ. ಕರ್ನಾಟಕ ಮತ್ತೊಮ್ಮೆ ಹೊತ್ತಿ‌ ಉರಿಯಲು ಕಾರಣವಾಗುತ್ತದೆ ಎಂದು ಹೇಳಿದರು.

Karnataka,Haj Bhavan,Tipu Sultan,K G Bopaiah

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ