ಭಾರತೀಯ ಸೇನೆ ಜನಸ್ನೇಹಿ ರೀತಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದೆ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಪಷ್ಟನೆ

ಶ್ರೀನಗರ:ಜೂ-29: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಕ್ರೂರವಾಗಿ ಕಾರ್ಯಾಚರಣೆ ನಡೆಸುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಸೇನೆ ಜನಸ್ನೇಹಿ ರೀತಿಯಲ್ಲಿ ಕಾರ್ಯಚರಣೆ ನಡೆಸುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಶ್ಮೀರ ಕಣವೆಯಲ್ಲಿ ಜನರ ಶಾಂತಿಯನ್ನು ಹಾಳು ಮಾಡಿ, ಹಿಂಸಾಚಾರ ಸೃಷ್ಟಿಸುತ್ತಿರುವ ಉಗ್ರರನ್ನು ಮಟ್ಟ ಹಾಕುವುದು ನಮ್ಮ ಪ್ರಮುಖ ಉದ್ದೇಶವಾಗಿದೆಯೇ ಹೊರತು, ಜನರಿಗೆ ಅನಾನುಕೂಲ ಸೃಷ್ಟಿಸುವುದು ನಮ್ಮ ಉದ್ದೇಶವಲ್ಲ ಎಂದು ಹೇಳಿದ್ದಾರೆ.

ಹಲವು ಕಠಿಣ ನಿಯಮಗಳ ಅಡಿಯಲ್ಲಿ ಸೇನೆ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದು, ಈ ಕಾರ್ಯಾಚರಣೆಗಳು ಹೀಗೆಯೇ ಮುಂದುವರೆಯಲಿವೆ. ನಾವು ಜನ ಸ್ನೇಹಿ ರೀತಿಯಲ್ಲಿ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದೇವೆ. ಕಾರ್ಯಾಚರಣೆ ವೇಳೆ ಸೇನೆ ಕ್ರೂರವಾಗಿ ವರ್ತಿಸುತ್ತಿವೆ ಎಂಬ ವರದಿಗಳು ಹಬ್ಬುತ್ತಿದ್ದು, ಇದು ಸತ್ಯಕ್ಕೆ ದೂರವಾದದ್ದು ಎಂದು ತಿಳಿಸಿದ್ದಾರೆ.

General Bipin Rawat, Army operating with people-friendly rules,Jammu and Kashmir

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ