ಪ್ರವಾಹ ಎಚ್ಚರಿಕೆ ಹಿನ್ನಲೆ: ಅಮರನಾಥ ಯಾತ್ರೆ ಸ್ಥಗಿತ

ಶ್ರೀನಗರ:ಜೂ-30: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ದಕ್ಷಿಣ ಭಾಗದಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಮಳೆಯಿಂದಾಗಿ ದಕ್ಷಿಣ ಕಾಶ್ಮೀರದ ಸಂಗಮ್ ಮತ್ತು ಶ್ರೀನಗರದ ರಾಮ್ ಮುನ್ಷಿ ಬಾಗ್ ನದಿಗಳು ಅಪಾಯದ ಮಟ್ಟಿ ಮೀರಿ ಹರಿಯುತ್ತಿದ್ದು, ಕಾಶ್ಮೀರದಲ್ಲಿ ಇದೀಗ ಪ್ರವಾಹ ಪರಿಸ್ಥಿತಿ ಎದುರಾಗಿದೆ.

ಅನಂತ್ ನಾಗ್ ಜಿಲ್ಲೆಯ ನುನ್ವಾನ್ ಮತ್ತು ಪಹಲ್ಗಾಂ, ಗಂದೇರ್ ಬಾಲ್ ಜಿಲ್ಲೆಯ ಬಲ್ಟಾಲ್ ಕಣಿವೆಯ ಮೇಲ್ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಎರಡು ದಿನಗಳ ಪಟ್ಟಿಗೆ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಸಲಾಗಿದೆ.

ಹವಾಮಾನ ಪರಿಸ್ಥಿತಿ ನಾಳೆ ಮಧ್ಯಾಹ್ನ ಸುಧಾರಿಸಲಿದೆ. ಆದರೆ ಜುಲೈ.1 ಮತ್ತು 2 ರಂದು ಮತ್ತೆ ಕಾಶ್ಮೀರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಹಲವೆಡೆ ಭೂಕುಸಿತಗೊಳ್ಳುವ ಸಂಭವವಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಲಿದೆ, ಹಲವೆಡೆ ಪ್ರವಾಹ ಪರಿಸ್ಥಿತಿಗಳೂ ಕೂಡ ಎದುರಾಗಲಿವೆ. ಭೀತಿಗೊಳಗಾಗದಂತೆ ಜನರ ಬಳಿ ಮನವಿ ಮಾಡಿಕೊಳ್ಳಲಾಗುತ್ತಿದೆ ಎಂದು ಕಾಶ್ಮೀರ ಹವಾಮಾನ ಇಲಾಖೆ ನಿರ್ದೇಶಕಿ ಸೋನಮ್ ಲೋಟಸ್ ಹೇಳಿದ್ದಾರೆ.
Flood Alert,Jammu And Kashmir, Amarnath Yatra,suspended

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ