ಕಂದಕಕ್ಕೆ ಉರುಳಿದ ಬೈಕ್- ಸವಾರ ಸ್ಥಳದಲ್ಲೆ ಸಾವು

ಹುಬ್ಬಳ್ಳಿ- ರಸ್ತೆ ಬದಿಯ ಕಂದಕ್ಕೆ ಬೈಕ್ ಉರುಳಿ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 63ರ ಕಲಘಟಗಿ ತಾಲ್ಲೂಕಿನ ಉಗ್ನಿಕೇರಿ ಬಳಿ ನಡೆದಿದೆ.‌ ಸತೋಷ್‌ಸಿಂಗ್ ಠಾಕೂರ್ (34) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯ ವಿದ್ಯಾನಗರದ ಶಿರೂರ ಪಾರ್ಕ್ ನಿವಾಸಿಯಾಗಿದ್ದಾನೆ.‌ ಹೆಲ್ಮೆಟ್ ಹಾಕಿಕೊಂಡಿದ್ದರು ಕೂಡ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.‌ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಫಲ್ಟಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ