ಒಂದೇ ಕುಟುಂಬದ 11 ಜನರ ಮೃತದೇಹ ಪತ್ತೆ

ನವದೆಹಲಿ:ಜು-1: ಒಂದೇ ಕುಟುಂಬದ 11 ಜನರ ಮೃತದೇಹಗಳು ಪತ್ತೆಯಾಗಿರುವ ಆಘಾತಕಾರಿ ಘಟನೆ ದೆಹಲಿಯ ಬುರಾರಿ ಪ್ರದೇಶದಲ್ಲಿ ನಡೆದಿದೆ.

11 ಮೃತ ದೇಹಗಳ ಪೈಕಿ ಹತ್ತು ದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, 75ರ ವೃದ್ಧೆಯ ದೇಹ ಮಾತ್ರ ನೆಲದ ಮೇಲಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತರಲ್ಲಿ ಏಳು ಮಂದಿ ಮಹಿಳೆಯರು ಹಾಗೂ ನಾಲ್ವರು ಪುರುಷರು ಸೇರಿದ್ದಾರೆ . ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸಾವಿಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಮೃತ ಕುಟುಂಬದವರು ಪೀಠೋಪಕರಣ ಮತ್ತು ಕಿರಾಣಿ ಅಂಗಡಿಯನ್ನಿಟ್ಟುಕೊಂಡಿದ್ದರು ಎನ್ನಲಾಗಿದೆ.

Delhi,Burari,Family Of 11 Found Dead, In Home

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ