ಸ್ಕಾರ್ಪಿಯೋ ಕಾರಿನಲ್ಲಿ ಬೆಂಕಿ ನಾಲ್ವರು ಪಾರು

ರಾಮನಗರ,ಜು.1-ಬೆಂಗಳೂರಿನಿಂದ ರಾಮನಗರದ ಕಡೆಗೆ ತೆರಳುತ್ತಿದ್ದ ಸ್ಕಾರ್ಪಿಯೋ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ನಾಲ್ವರು ಸ್ಕಾರ್ಪಿಯೋ ಕಾರಿನಲ್ಲಿ ಇಂದು ಬೆಳಗ್ಗೆ ರಾಮನಗರದ ಕಡೆಗೆ ಹೋಗುತ್ತಿದ್ದಾಗ ತಾಲ್ಲೂಕಿನ ಮದರ್ ಸಾಬರ ದೊಡ್ಡಿ ಬಳಿ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸಮಯಪ್ರಜ್ಞೆಯಿಂದ ಕಾರನ್ನು ರಸ್ತೆಬದಿ ನಿಲ್ಲಿಸಿ ನಾಲ್ವರು ಕಾರಿನಿಂದ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನೋಡುನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಕಾರನ್ನು ಸಂಪೂರ್ಣ ಆವರಿಸಿಕೊಂಡು ಧಗದಗ ಹೊತ್ತಿ ಉರಿದಿದೆ. ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿದರಾದರೂ ಕಾರು ಸಂಪೂರ್ಣ ಸುಟ್ಟುಹೋಗಿದೆ. ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ