ಮಂದಸೌರ್ ಅತ್ಯಾಚಾರ ಪ್ರಕರಣ: ಆರೋಪಿ ಶಿರಚ್ಛೇದನ ಮಾಡಿದವರಿಗೆ 5 ಲಕ್ಷ ಬಹುಮಾನ

ಭೋಪಾಲ್:ಜು-2: ಮಂದಸೌರ್ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾದವರ ತಲೆ ಕಡಿದು ತಂದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಹೊಶಂಗಾಬಾದ್ ಜಿಲ್ಲೆಯ ಬಿಜೆಪಿ ನಾಯಕ ಸಂಜೀವ್ ಮಿಶ್ರಾ ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಿಶ್ರಾ, ಮಂದ್‌ಸೌರ್ ಅತ್ಯಾಚಾರ ಪ್ರಕರಣ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಬೇಕು. ಒಂದು ವೇಳೆ ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಂಡಿದ್ದೇ ಆದರೆ, ಆರೋಪಿಗಳ ಶಿರಚ್ಛೇದನ ಮಾಡಿದವರಿಗೆ ನಾನು 5 ಲಕ್ಷ ರೂಪಾಯಿ ನೀಡುತ್ತೇನೆ ಎಂದಿದ್ದಾರೆ.

ಜೂನ್ 28 ರಂದು ಮಂದಸೌರದಲ್ಲಿ 8 ವರ್ಷದ ಮಗುವನ್ನು ಅಪಹರಿಸಿ ಅತ್ಯಾಚಾರ ಮಾಡಲಾಗಿತ್ತು. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ತ್ವರಿತ ತನಿಖೆಗಾಗಿ ವಿಶೇಷ ತನಿಖಾ ದಳವನ್ನು ಸಹ ನೇಮಿಸಲಾಗಿದೆ.

ತನ್ನ ಮಗನಿಗೂ, ಈ ಪ್ರಕರಣಕ್ಕೂ ಸಂಬಂಧವಿಲ್ಲ, ಅವನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದಿರುವ ಆರೋಪಿಗಳಲ್ಲೊಬ್ಬನ ತಾಯಿ ಸಿಬಿಐ ತನಿಖೆಗೆ ಆದೇಶಿಸಿದ್ದಾರೆ.

ಪ್ರಕರಣವನ್ನು ಖಂಡಿಸಿರುವ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಆರೋಪಿಗಳು ಗಲ್ಲು ಶಿಕ್ಷೆಗಿಂತ ಕಡಿಮೆ ಶಿಕ್ಷೆಗೆ ಅರ್ಹರಲ್ಲ ಎಂದಿದ್ದಾರೆ.

Mandsaur rape case, accused, 5 lakh bounty for beheading

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ