ಕಾಂಗರೂಗಳಿಗೆ ನೀರು ಕುಡಿಸಿದ್ದ ಆಂಗ್ಲರಿಗೆ ಮಣ್ಣುಮುಕ್ಕಿಸಿದ ಟೀಂ ಇಂಡಿಯಾ

ಬ್ರಿಸ್ಟೋಲ್: ಇಂಗ್ಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀ ಇಂಡಿಯಾ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಇಂಗ್ಲೆಂಡ್ ತಂಡ ನೀಡಿದ್ದ 199 ರನ್ ಗಳ ಬೃಹತ್ ಮೊತ್ತವನ್ನು ಬೆನ್ನು ಹತ್ತಿದ ಭಾರತ ತಂಡ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರ ಭರ್ಜರಿ ಶತಕದ ನೆರವಿನಿಂದ ಗೆಲುವು ಸಾಧಿಸಿತು.
ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಕಳಪೆ ಫಾರ್ಮ್ ನಿಂದ ಹೊರಬಂದಿದ್ದು ಮಾತ್ರವಲ್ಲದೇ ತಂಡದ ಗೆಲುವಿನಲ್ಲಿ ರೋಹಿತ್ ಶರ್ಮಾ ನಿರ್ಣಾಯಕ ಪಾತ್ರವಹಿಸಿದರು. ರೋಹಿತ್ ಶರ್ಮಾಗೆ ನಾಯಕ ವಿರಾಟ್ ಕೊಹ್ಲಿ (43ರನ್) ಹಾಗೂ ಮಧ್ಯಮ ಕ್ರಮಾಂಕಕ್ಕೆ ಭಡ್ತಿ ಪಡೆದು ಬಂದ ಹಾರ್ದಿಕ್ ಪಾಂಡ್ಯಾ (33 ರನ್) ಉತ್ತಮ ಸಾಥ್ ನೀಡಿದರು.
ಅಂತಿಮವಾಗಿ ಭಾರತ ತಂಡ ಕೇವಲ 18.4 ಓವರ್ ಗಳಲ್ಲಿಯೇ 3 ವಿಕೆಟ್ ನಷ್ಟಕ್ಕೆ 201 ರನ್ ಗಳಿಸುವ ಮೂಲಕ ಪಂದ್ಯವನ್ನು ಗೆದ್ದಿತ್ತು. ಅಲ್ಲದೆ 3 ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿತು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ