ಜಮ್ಮು-ಕಾಶ್ಮೀರದಲ್ಲಿ ಮತ್ತೋರ್ವ ಪೊಲೀಸ್ ಅಧಿಕಾರಿ ಅಪಹರಿಸಿದ ಉಗ್ರರು

ಜಮ್ಮು:ಜು-೨೮: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು ಅಪಹರಿಸಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ನಡೆದಿದೆ.

ಶಕೀಲ್ ಅಹ್ಮದ್ ಲೋನೆ ಅಪಹರಣಕ್ಕೊಳಗಾಗಿರುವ ಪೊಲೀಸ್ ಅಧಿಕಾರಿ. ಶಕೀಲ್ ಅವರು ಜಮ್ಮು ಮತ್ತು ಕಾಶ್ಮೀರದ ವಿಶೇಷ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಪುಲ್ವಾಮ ಜಿಲ್ಲೆಯ ಛಾನ್ ಕಿತರ್ ತ್ರಾಲ್ ಎಂಬಲ್ಲಿ ಕಳೆದ ರಾತ್ರಿ ಉಗ್ರರು ಅಧಿಕಾರಿಯನ್ನು ಅಪಹರಿಸಿದ್ದಾರೆ. ಅಧಿಕಾರಿಯ ಪತ್ತೆಗಾಗಿ ಪೊಲೀಸರು ಇದೀಗ ಅನೇಕ ತಂಡಗಳನ್ನು ರಚನೆ ಮಾಡಿದ್ದು, ತೀವ್ರ ಹುಡುಕಾಟ ನಡೆಸಿದ್ದಾರೆ.

ಅಧಿಕಾರಿ ಅಪಹರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಎಸ್’ಪಿ ವೈದ್ ಅವರು, ಮಾಹಿತಿಯನ್ನು ಪರಿಶೀಲನೆ ನಡೆಸಲಾಗುತ್ತಿದೆ. ಸಂಬಂಧಿಕರೊಬ್ಬರನ್ನು ಭೇಟಿ ಮಾಡುವ ಸಲುವಾಗಿ ಶಕೀಲ್ ಹೋಗಿದ್ದರು ಎಂದು ಕುಟುಂಬಸ್ಥರು ಹೇಳಿದ್ದಾರೆಂದು ತಿಳಿಸಿದ್ದಾರೆ.

ವಾರಗಳ ಹಿಂದಷ್ಟೇ ಪೊಲೀಸ್ ಪೇದೆಯೊಬ್ಬರನ್ನು ಉಗ್ರರು ಅಪಹರಿಸಿದ್ದರು. ನಂತರ ಗುಂಡು ಹಾರಿಸಿ ಹತ್ಯೆ ಮಾಡಿದ್ದರು.

Jammu and Kashmir,Another cop abducted by terrorists,Pulwama’s Tral

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ