ಮರಾಠಾ ಮೀಸಲಾತಿ ಪ್ರತಿಭಟನೆ: ಮತ್ತೋರ್ವ ಆತ್ಮಹತ್ಯೆಗೆ ಶರಣು

ಮುಂಬೈ:-31: ಮರಾಠಾ ಮೀಸಲಾತಿಗಾಗಿ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇಂದು ನಡೆದ ಪ್ರತಿಭಟನೆ ವೇಳೆ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ಮೀಸಲಾತಿಗಾಗಿ ಆಗ್ರಹಿಸಿ ಆತ್ಮಹತ್ಯೆ ಮಾಡಿಕೊಂಡಿರುವವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಮಹಾರಷ್ಟ್ರದ ಬೀಡ್ ಜಿಲ್ಲೆಯ ಕೇಜ್ ತಹಶೀಲ್ ನ ವೀದಾ ಗ್ರಾಮದ 35 ವರ್ಷದ ಅಭಿಜೀತ್ ದೇಶಮುಖ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಮನೆ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ.

ಆತ್ಮಹತ್ಯೆಗೆ ಮುನ್ನ ಬರೆದ ಡೆತ್ ನೋಟ್ ನಲ್ಲಿ ತಾನು ಮರಾಠಾ ಸಮುದಾಯಕ್ಕೆ ಮೀಸಲಾತಿ ದೊರಕಿಸುವ ಸಲುವಾಗಿ ನಡೆಯುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಈ ಕಠಿಣ ತೀರ್ಮಾನ ತೆಗೆದುಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾನೆ. ಅಲ್ಲದೆ ನಿರುದ್ಯೋಗ ಮತ್ತು ಬ್ಯಾಕ್ ಸಾಲದ ಸಮಸ್ಯೆಗಳನ್ನು ಸಹ ಆತ ತನ್ನ ಡೆತ್ ನೋಟ್ ನಲ್ಲಿ ವಿವರಿಸಿದ್ದಾಗಿ ಬೀಡ್ ಸಬ್ ಇನ್ಸ್ ಪೆಕ್ಟರ್ ಜಿ. ಶ್ರೀಧರ್ ತಿಳಿಸಿದ್ದಾರೆ.

Maratha quota demand,Maharashtra, 5th suicide,

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ