ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾಗಿದ್ದ ಎನ್.ಆರ್. ವಿಶುಕುಮಾರ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕರನ್ನಾಗಿ ಸರ್ಕಾರ ವರ್ಗಾವಣೆ ಮಾಡಿದೆ.
ವಾರ್ತಾ ಇಲಾಖೆ ನಿರ್ದೇಶಕರಾಗಿದ್ದ ಐಪಿಎಸ್ ಅಧಿಕಾರಿ ಡಾ.ಪಿ.ಎಸ್. ಹರ್ಷ ಅವರನ್ನು ಮಾತೃ ಇಲಾಖೆಗೆ ಕಳುಹಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾಗಿ ವಿಶುಕುಮಾರ್ಗೆ ಪ್ರಭಾರ ನೀಡಲಾಗಿದೆ.