ಕೇರಳದಲ್ಲಿ ಸಂಕಷ್ಟಕ್ಕೀಡಾದವರ ರಕ್ಷಣಾ ಕಾರ್ಯಕ್ಕೆ ನೆರವಾಗಿ: ಕೈ ಕಾರ್ಯಕರ್ತರಿಗೆ ರಾಹುಲ್ ಸೂಚನೆ

ನವದೆಹಲಿ:ಆ-೧೧: ಪ್ರವಾಹ ಪರಿಸ್ಥಿತಿಗೆ ತುತ್ತಾಗಿರುವ ಕೇರಳದಲ್ಲಿ ಭಾರತೀಯ ಸೇನೆ ಮತ್ತು ಎನ್ ಡಿಆರ್ ಎಫ್ ನಡೆಸುತ್ತಿರುವ ರಕ್ಷಣಾ ಕಾರ್ಯಾಚರಣೆಯಲ್ಲಿ ಸಾಥ್ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ನಿಜಕ್ಕೂ ಕೇರಳದಲ್ಲಿ ಪ್ರಕೃತಿ ಮಾತೆ ಮುನಿದಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಸಂತ್ರಸ್ಥರ ನೆರವಿಗೆ ಕಾಂಗ್ರೆಸ್ ಸದಾ ಸಿದ್ದವಿದ್ದು, ಕೂಡಲೇ ಕಾರ್ಯಕರ್ತರು ಸಂತ್ರಸ್ಥರ ನೆರವಿಗೆ ಧಾವಿಸಿ. ಅಪಾಯದಲ್ಲಿರುವವರನ್ನು ರಕ್ಷಿಸಿ, ಅವರಿಗೆ ನೆರವಾಗಿ ಎಂದು ಸೂಚನೆ ನೀಡಿದ್ದಾರೆ.

ಪ್ರಸ್ತುತ ರಕ್ಷಣಾ ಕಾರ್ಯಾಚರಣೆಯಲ್ಲಿರುವ ಸೇನೆ ಹಾಗೂ ಎನ್ ಡಿಆರ್ ಎಫ್ ತಂಡಕ್ಕೂ ಸಾಥ್ ನೀಡಿ ಎಂದು ಸಲಹೆ ನೀಡಿದ್ದಾರೆ.

ಕೇರಳದಲ್ಲಿ ಅನಿರೀಕ್ಷಿತ ಮತ್ತು ಭಾರಿ ಪ್ರಮಾಣದ ಮಳೆಯಾಗುತ್ತಿದ್ದು, ಭೀಕರ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಅಪಾರ ಪ್ರಮಾಣದ ಆಸ್ತಿ ನಷ್ಟವಾಗಿದ್ದು, ನೂರಾರು ಮನೆಗಳು ಕುಸಿಯುವ ಮೂಲಕ ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ನಾನು ಈ ಮೂಲಕ ಕಾರ್ಯಕರ್ತರಿಗೆ ಮನವಿ ಮಾಡುವುದೇನೆಂದರೆ ಕೂಡಲೇ ಕೇರಳದ ಪ್ರವಾಹ ಸಂತ್ರಸ್ಥರ ನೆರವಿಗೆ ಧಾವಿಸಿ. ಯಾರಿಗೆ ಅಗತ್ಯವಿದೆಯೋ ಅವರಿಗೆ ನೀವು ಸಹಾಯ ಮಾಡಿ. ಪ್ರಜೆಗಳ ಸಂಕಷ್ಟದ ಕಾಲದಲ್ಲಿ ನಾವು ಅವರೊಂದಿಗಿರಬೇಕು ಎಂದು ರಾಹುಲ್ ಟ್ವೀಟ್ ನಲ್ಲಿ ಮನವಿ ಮಾಡಿದ್ದಾರೆ.

kerala,heavy rain,rahul gandhi,tweet

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ