ಸಾಲಮನ್ನಾ ಜೆಡಿಎಸ್ ಸಂಭ್ರಮಾಚರಣೆ

ಹುಬ್ಬಳ್ಳಿ-: ರಾಷ್ಟ್ರೀಕಕೃತ ಬ್ಯಾಂಕುಗಳಲ್ಲಿ ರೈತರ 2 ಲಕ್ಷದ ವರೆಗಿನ ಸಾಲವನ್ನ ಮನ್ನಾ ಹಿನ್ನೆಲೆ ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ಬಳಿ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ 2 ಲಕ್ಷವರಿಗಿನ ಸಾಲ ಮನ್ನಾ ಮಾಡುವ ಮೂಲಕ ನುಡಿದಂತೆ ನಡೆದುಕೊಂಡಿದ್ದಾರೆ ಎಂದು ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ಬಳಿ ಜೆಡಿಎಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಸಿಎಂ ಕುಮಾರಸ್ವಾಮಿ ರೈತರ ಪರವಾಗಿದ್ದು, ಕುಮಾರಸ್ವಾಮಿ ಅವರಿಗೆ ಜಯ ಘೋಷಣೆ ಕೂಗಿ, ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎನ್.ಎಚ್.ಕೋನರೆಡ್ಡಿ,ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ ರಾಜಣ್ಣ ಕೊರವಿ, ಜೆಡಿಎಸ್ ಮುಖಂಡರಾದನಾಗನಗೌಡ ಪಾಟೀಲ ಅನೇಕರು ಭಾಗವಹಿಸಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ