ಅಕ್ಕ ಸಮ್ಮೇಳನದಲ್ಲಿ ಪುನೀತ್ ರಾಜಕುಮಾರ್‌ರಿಂದ ‘ಕವಲುದಾರಿ’ ಟೀಸರ್ ಬಿಡುಗಡೆ!

ಗೋದಿ ಬಣ್ಣ ಸಾಧಾರಣ ಮೈಕಟ್ಟು ಚಿತ್ರವನ್ನು ನಿರ್ದೇಶಿಸಿದ್ದ ಹೇಮಂತ್ ಎಂ ರಾವ್ ನಿರ್ದೇಶನದ ರಿಶಿ ಅಭಿನಯದ ಕವಲುದಾರಿ ಚಿತ್ರದ ಟೀಸರ್ ಅನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಲಿದ್ದಾರೆ.
ಕವಲುದಾರಿ ಚಿತ್ರದ ಪೋಸ್ಟ್ ಪ್ರೊಡೆಕ್ಷನ್ ಕೆಲಸಗಳು ಬರದಿಂದ ಸಾಗಿವೆ. ಈ ಮಧ್ಯೆ ಚಿತ್ರದ ಕುರಿತಂತೆ ಹೈಪ್ ಕ್ರಿಯೆಟ್ ಮಾಡಲು ಚಿತ್ರತಂಡ ಟೀಸರ್ ಬಿಡುಗಡೆಗೆ ಸಿದ್ಧತೆ ನಡೆಸಿದೆ.
ಸೆಪ್ಟೆಂಬರ್ 2ರಂದು ಪುನೀತ್ ರಾಜಕುಮಾರ್ ಕವಲುದಾರಿ ಚಿತ್ರದ ಟೀಸರ್ ಬಿಡುಗಡೆ ಮಾಡಲಿದ್ದಾರೆ. ಇನ್ನು ಪುನೀತ್ ರಾಜಕುಮಾರ್ ಅವರ ಪಿಆರ್ಕೆ ಪ್ರೊಡೆಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಮೊದಲ ಚಿತ್ರ.
ಡಲ್ಲಾಸ್ ನಲ್ಲಿ ನಡೆಯಲಿರುವ ಅಕ್ಕ ಸಮ್ಮೇಳನದಲ್ಲಿ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ವಿಶ್ವ ಮಟ್ಟದಲ್ಲಿ ಚಿತ್ರದ ಕುರಿತು ನಿರೀಕ್ಷೆ ಹೆಚ್ಚಾಗಲಿದೆ.
ಕವಲುದಾರಿ ಚಿತ್ರ ಪತ್ತೆದಾರಿ ಚಿತ್ರಕಥೆಯನ್ನು ಹೊಂದಿದ್ದು ಚಿತ್ರದಲ್ಲಿ ರಿಶಿ ಟ್ರಾಫಿಕ್ ಪೊಲೀಸ್ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ಇನ್ನು ಚಿತ್ರದಲ್ಲಿ ಅನಂತ್ ನಾಗ್, ರೋಶ್ನಿ ಪ್ರಕಾಶ್, ಅಚ್ಯುತ್ ಕುಮಾರ್, ಸುಮನ್ ರಂಗನಾಥ್ ಅಭಿನಯಿಸುತ್ತಿದ್ದಾರೆ.
ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜಿಸುತ್ತಿದ್ದು ಅದ್ವೈತ ಗುರುಮೂರ್ತಿ ಛಾಯಾಗ್ರಹಣವಿರಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ