ಬಸ್‍ನಲ್ಲಿ ಸೀಟು ಹಿಡಿಯಲು ಹೋಗಿ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿಯೊಬ್ಬ ಸಾವು

ಚಿಕ್ಕಬಳ್ಳಾಪುರ, ಆ.31- ಬಸ್‍ನಲ್ಲಿ ಸೀಟು ಹಿಡಿಯಲು ಹೋಗಿ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಗೌರಿಬಿದನೂರು ತಾಲ್ಲೂಕಿನ ಚರಣ್‍ಕುಮಾರ್ (18) ಮೃತಪಟ್ಟ ದುರ್ದೈವಿ.
ಚಿಕ್ಕಬಳ್ಳಾಪುರ ಹೊರ ವಲಯದ ಬಿಜಿಎಸ್ ಪಾಲಿಟೆಕ್ನಿಕ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದು , ಎಂದಿನಂತೆ ಕಾಲೇಜು ಮುಗಿಸಿಕೊಂಡು ಗ್ರಾಮಕ್ಕೆ ತೆರಳಲು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದಾನೆ.
ಈ ಸಂದರ್ಭದಲ್ಲಿ ಕಿಟಕಿ ಮೂಲಕ ಸೀಟಿಗೆ ಬ್ಯಾಗ್ ಹಾಕಿ ಸೀಟು ಕಾಯ್ದಿರಿಸಲು ಮುಂದಾದಾಗ ಬಸ್ ಹಿಂದಕ್ಕೆ ಚಲಿಸಿದ ಪರಿಣಾಮ ಆಯ ತಪ್ಪಿ ಕೆಳಗೆ ಬಿದ್ದಿದ್ದು, ತಲೆಗೆ ಗಂಭೀರವಾದ ಪೆಟ್ಟು ಬಿದ್ದ ಕಾರಣ ಸ್ಥಳದಲ್ಲೇ ಅಸು ನೀಗಿದ್ದಾನೆ.
ಈ ಸಂಬಂಧ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೆÇಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ