ಅಪ್ರಾಪ್ತ ನಾಂದಿನಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ಪೆÇೀಸ್ಕೊ ವಿಶೇಷ ನ್ಯಾಯಾಲಯ 10 ವರ್ಷ ಶಿಕ್ಷೆ ಹಾಗೂ 55 ಸಾವಿರ ದಂಡ ವಿಧಿಸಿ ತೀರ್ಪು

ಮೈಸೂರು,ಆ.31- ಅಪ್ರಾಪ್ತ ನಾಂದಿನಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ಪೆÇೀಸ್ಕೊ ವಿಶೇಷ ನ್ಯಾಯಾಲಯ 10 ವರ್ಷ ಶಿಕ್ಷೆ ಹಾಗೂ 55 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಕೆ.ಆರ್.ನಗರದ ಮಾಯಿಗೌಡನ ಹಳ್ಳಿಯ ಮಹದೇವ ಶಿಕ್ಷೆಗೊಳಗಾದ ವ್ಯಕ್ತಿ.
ನಗರದ ಕೂಟಗಳ್ಳಿ ಕೈಗಾರಿಕಾ ಪ್ರದೇಶದ ಸಿಮೆಂಟ್ ಇಟ್ಟಿಗೆ ಕಾರ್ಖಾನೆಯ ಭದ್ರತಾ ಸಿಬ್ಬಂದಿ ವಸತಿ ಗೃಹದಲ್ಲಿ ಈತ ವಾಸವಾಗಿದ್ದನು.
2015, ಮಾರ್ಚ್ 20ರಂದು ಈತನ ನಾದಿನಿ ಮನೆಗೆ ಬಂದಿದ್ದಾಗ ಆಕೆಯ ಮೇಲೆ ನಿರಂತರ ಅತ್ಯಾಚಾರವೆಸಗಿ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನು.

ಬಾಲಕಿಯ ದೈಹಿಕ ಬೆಳವಣಿಗೆ ಬಗ್ಗೆ ಅನುಮಾನಗೊಂಡ ಪೆÇೀಷಕರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿದಾಗ ಈಕೆ ಗರ್ಭಿಣಿ ಎಂಬುದನ್ನು ವೈದ್ಯರು ತಿಳಿಸಿದ್ದಾರೆ.
ಈ ವಿಷಯ ತಿಳಿದು ಆಘಾತಗೊಂಡ ಪೆÇೀಷಕರು ಬಾಲಕಿಯನ್ನು ಈ ಬಗ್ಗೆ ವಿಚಾರಿಸಿದಾಗ ನಡೆದ ಘಟನೆಯನ್ನು ತಿಳಿಸಿದ್ದಾಳೆ.
ಈ ಸಂಬಂಧ ಬಾಲಕಿ ಪೆÇೀಷಕರು ವಿಜಯನಗರ ಠಾಣೆಗೆ ಅಳಿಯನ ವಿರುದ್ಧ ದೂರು ನೀಡಿದ್ದರು.
ಪೆÇೀಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೆÇಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ವಿಚಾರಣೆ ನಡೆಸಿದ ಪೆÇಸ್ಕೋ ನ್ಯಾಯಾಲಯ ನ್ಯಾಯಾಧೀಶರಾದ ಜಯಶ್ರೀ ಅವರು ಆರೋಪಿಗೆ 10 ವರ್ಷ ಶಿಕ್ಷೆ ಹಾಗೂ 55 ಸಾವಿರ ದಂಡ ವಿಧಿಸಿ ಆದೇಶ ನೀಡಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶಿವರುದ್ರಸ್ವಾಮಿ ವಾದ ಮಂಡಿಸಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ