ಸುಲಭವಾಗಿ ಗೆಲ್ಲುವ ಪಂದ್ಯವನ್ನು ಕೈಚೆಲ್ಲಿದ ಟೀಂ ಇಂಡಿಯಾ, ಟೆಸ್ಟ್ ಸರಣಿ ಇಂಗ್ಲೆಂಡ್ ಕೈವಶ!

ಸೌತಾಂಪ್ಟನ್: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸುಲಭವಾಗಿ ಗೆಲ್ಲಬಹುದಿದ್ದ ಪಂದ್ಯವನ್ನು ಕೈಚೆಲ್ಲಿ ಇಂಗ್ಲೆಂಡ್ ಶರಣಾಗಿದೆ.
ಸೌತಾಂಪ್ಟನ್ ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 246 ರನ್ ಗಳಿಗೆ ಆಲೌಟ್ ಆಯಿತು. ನಂತರ ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ 273 ರನ್ ಗಳಿಗೆ ಆಲೌಟ್ ಆಯಿತು. ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡ 271 ರನ್ ಗಳಿಗೆ ಆಲೌಟ್ ಆಗಿದ್ದು ಟೀಂ ಇಂಡಿಯಾಗೆ ಗೆಲ್ಲಲು 245 ರನ್ ಗಳ ಗುರಿ ನೀಡಿತ್ತು.
ಇಂಗ್ಲೆಂಡ್ ನೀಡಿದ 245 ರನ್ ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಯಿತು 22 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ನಾಯಕ ವಿರಾಟ್ ಕೊಹ್ಲಿ ಹಾಗೂ ಅಜಿಂಕ್ಯ ರಹಾನೆ ಅರ್ಧ ಶತಕ ಸಿಡಿಸುವ ಮೂಲಕ ಗೆಲುವಿನ ಭರವಸೆ ಮೂಡಿಸಿದರು.
ಆದರೆ 58 ರನ್ ಗಳಿಸಿದ್ದ ವಿರಾಟ್ ಕೊಹ್ಲಿಯನ್ನು ಮೊಹಿನ್ ಅಲಿ ಔಟ್ ಮಾಡಿದರು. ಅದರೊಂದಿಗೆ ಟೀಂ ಇಂಡಿಯಾದ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿತು. ಅಂತಿಮವಾಗಿ ಟೀಂ ಇಂಡಿಯಾ 184 ರನ್ ಗಳಿಗೆ ಆಲೌಟ್ ಆಗಿದ್ದು, 60 ರನ್ ಗಳಿಂದ ಹೀನಾಯ ಸೋಲು ಕಂಡಿದೆ.
ನಾಲ್ಕನೇ ಟೆಸ್ಟ್ ಪಂದ್ಯ ಗೆಲುವಿನ ಮೂಲಕ ಇಂಗ್ಲೆಂಡ್ ತಂಡ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 3-1 ಅಂತರದಿಂದ ಸರಣಿಯನ್ನು ಕೈವಶ ಮಾಡಿಕೊಂಡಿದೆ.
ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸುಲಭವಾಗಿ ಗೆಲ್ಲಬಹುದಿದ್ದ ಪಂದ್ಯವನ್ನು ಕೈಚೆಲ್ಲಿ ಇಂಗ್ಲೆಂಡ್ ಶರಣಾಗಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ