ಒಂದೇ ಯುವತಿಗಾಗಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡರಾ ಇಬ್ಬರು ವಿದ್ಯಾರ್ಥಿಗಳು…?

ಹೈದರಾಬಾದ್: ಒಂದು ಹುಡುಗಿಗಾಗಿ ಯುವಕರಿಬ್ಬರು ಪರಸ್ಪರ ಬೆಂಕಿ ಹಚ್ಚಿಕೊಂಡು ಸಜೀವ ದಹನಗೊಂಡ ಘೋರ‍ ಘಟನೆ ತೆಲಂಗಾಣದ ಜಗ್ತಿಯಾಲ್ ಪಟ್ಟಣದಲ್ಲಿ ನಡೆದಿದೆ.

ಮೃತ ಯುವಕರನ್ನು 16 ವರ್ಷದ ಮಹೇಂದರ್ ಹಾಗೂ ರವಿತೇಜ ಎಂದು ಗುರುತಿಸಲಾಗಿದ್ದು, ವಿದ್ಯಾರ್ಥಿಗಳಾಗಿದ್ದಾರೆ. ಮಿಷನರಿ ಶಾಲೆಯ ವಿದ್ಯಾರ್ಥಿಗಳಾಗಿದ್ದ ಈ ಇಬ್ಬರೂ ರಾತ್ರಿ ಮದ್ಯ ಸೇವನೆ ಮಾಡಿ ಈ ಕೃತ್ಯ ಮಾಡಿಕೊಂಡಿದ್ದಾರೆ.

ಇಬ್ಬರೂ ವಿದ್ಯಾರ್ಥಿಗಳು ತಮ್ಮದೇ ಶಾಲೆಯಲ್ಲಿ ಓದುತ್ತಿದ್ದ ಹುಡುಗಿಯನ್ನು ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಒಂದೇ ಹುಡುಗಿಗಾಗಿ ಆರಂಭವಾದ ಜಗಳ ಬಳಿಕ ಪರಸ್ಪರ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಮಹೇಂದರ್​ ಎಂಬಾತ ಸ್ಥಳದಲ್ಲೇ ಸಾವಿಗೀಡಾದರೆ, ಬೆಂಕಿಯಲ್ಲಿ ಬೆಂದು ಗಂಭೀರವಾಗಿ ಗಾಯಗೊಂಡಿದ್ದ ರವಿ ತೇಜ ಎಂಬಾತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಇನ್ನು ಘಟನಾ ಸ್ಥಳದಲ್ಲಿ ಮತ್ತೊಬ್ಬ ಹುಡುಗನಿದ್ದ ಎಂದು ಮೃತರ ಕುಟುಂಬದವರು ಹೇಳಿಕೆ ನೀಡಿದ್ದಾರೆ. ತನಿಖಾಧಿಕಾರಿಗಳು ಘಟನಾ ಸ್ಥಳದಲ್ಲಿ ಬಿಯರ್​ ಬಾಟಲ್​ ಹಾಗೂ ಮೊಬೈಲ್​ ಫೋನ್ಸ್​ ಅನ್ನು ಪತ್ತೆ ಹಚ್ಚಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ನಡೆಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ