ಪಾಕಿಸ್ತಾನಕ್ಕೆ ಭಾರತ ತಿರುಗೇಟು

ನವದೆಹಲಿ: ಕಾಶ್ಮೀರ ವಿಚಾರದಲ್ಲಿ ಪದೇ ಪದೇ ಖ್ಯಾತೆ ತೆಗೆಯುತ್ತಿರುವ ಪಾಕಿಸ್ತಾನಕ್ಕೆ ಖಡಕ್ ತಿರುಗೇಟು ನೀಡಿರುವ ಭಾರತ ನಮ್ಮ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮಲ್ಲಿರುವ ಭಯೋತ್ಪಾದನೆಗೆ ಮೊದಲು ಕಡಿವಾಣ ಹಾಕಿ ಎಂದು ಸೂಚಿಸಿದೆ.

ಪಾಕ್ ಪ್ರಧಾನಿ ಇಮ್ರಾನ್ ಖಾನ್, ಕಾಶ್ಮೀರದಲ್ಲಿ ಅಮಾಯಕರನ್ನು ಹತ್ಯೆಗೈವ ಹೊಸ ಆವರ್ತನವನ್ನು ಭಾರತ ಆರಂಭಿಸಿದೆ ಎಂದು ಟ್ವೀಟ್ ಮಾಡುವ ಮೂಲಕ ಮತ್ತೆ ವಿವಾದ ಎಬ್ಬಿಸಿದ್ದರು. ಅಲ್ಲದೇ ಕಾಶ್ಮೀರ ಸಮಸ್ಯೆಯನ್ನು ವಿಶ್ವಸಂಸ್ಥೆಯ ಠರಾವಿನ ಪ್ರಕಾರ ಮಾತುಕತೆ ಮೂಲಕವೇ ಇತ್ಯರ್ಥಪಡಿಸಲು ಸಾಧ್ಯ. ಮಾತುಕತೆ ಆರಂಭಿಸೋಣ ಬನ್ನಿ ಎಂದು ಆಹ್ವಾನ ನೀಡಿದ್ದರು.

ಈ ಹೇಳಿಕೆಯನ್ನು ಖಂಡಿಸಿರುವ ಭಾರತ, ಪಾಕಿಸ್ತಾನ ಪ್ರಧಾನಿ ಭಾರತದ ಆಂತರಿಕ ವಿಚಾರಗಳಲ್ಲಿ ಮೂಗು ತೂರಿಸುವ ಬದಲು ತಮ್ಮ ದೇಶದಲ್ಲಿರುವ ಸಮಸ್ಯೆಗಳತ್ತ ಗಮನಹರಿಸಬೇಕು ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ತಿಳಿಸಿದ್ದಾರೆ.

ಭಾರತ ಹಾಗೂ ಇತರೆ ನೆರೆರಾಷ್ಟ್ರಗಳಲ್ಲಿ ಭಯೋತ್ಪಾದಕರ ಚಟುವಟಿಕೆಗಳನ್ನು ಹೆಚ್ಚಿಸುವ ಬದಲು ತನ್ನ ನಾಗರೀಕರ ಹಿತಕ್ಕಾಗಿ ಭಯೋತ್ಪಾದನೆ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಳ್ಳಬೇಕು. ಹಿಂಸಾಚಾರಕ್ಕೆ ಬೆಂಬಲ ನೀಡುತ್ತಾ, ಮಾತುಕತೆಗೆ ಬರುವಂತೆ ಆಹ್ವಾನ ನೀಡಿವ ಪಾಕಿಸ್ತಾನದ ಕರಾಳ ಮುಖ ಇಡೀ ವಿಶ್ವಕ್ಕೆ ತಿಳಿದಿದೆ ಎಂದು ಗುಡುಗಿದ್ದಾರೆ.

India,Pakistan,Imran Khan, Kashmir issue,

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ