ಉಪಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಬರಲಿದೆ ಕೇಂದ್ರ ಸಚಿವ ಸದಾನಂದ ಗೌಡ

ಬೆಂಗಳೂರು,ಅ.30- ಮೂರು ಲೋಕಸಭಾ ಹಾಗೂ ಎರಡು ವಿಧಾನಸಬಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಬರಲಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಭವಿಷ್ಯ ನುಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣಬಲ, ತೋಳ್ಬಲಕ್ಕೆ ಜನತೆ ಈ ಉಪಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಫಲಿತಾಂಶದಿಂದ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದರು.

ಉಪ ಚುನಾವಣೆಯಲ್ಲಿ ಜಾತಿ, ಧರ್ಮ ವಿಭಜನೆ ಮಾಡುವವರಿಗೆ ಪಾಠ ಕಲಿಸಲು ಮತದಾರರು ಸಜ್ಜಾಗಿದ್ದಾರೆ.ನಾವು ಈ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸಕ್ಕೆ ಕೈ ಹಾಕುವುದಿಲ್ಲ.ಅವರಲ್ಲೇ ಒಡಕು ಉಂಟಾದರೆ ನಾವೇನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
ಜಗದೀಶ್ ಶೆಟ್ಟರ್ ಯಾವ ಅರ್ಥದಲ್ಲಿ ಬಿಜೆಪಿ 113 ಸಂಖ್ಯೆ ತಲುಪುತ್ತದೆ ಎಂದು ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ಫಲಿತಾಂಶದ ಬಳಿಕ ಸಾಕಷ್ಟು ಬದಲಾವಣೆಯಾಗಲಿದೆ. ಫಲಿತಾಂಶ ಪ್ರಕಟಗೊಳ್ಳುವವರೆಗೆ ಕಾದು ನೋಡಿ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ