ಆಜಿ೵ಯ ವಿಚಾರಣೆ ಶುಕ್ರುವಾರಕ್ಕೆ ಮುಂದೂಡಿಕೆ

ಬೆಂಗಳೂರು, ಅ.31- ನಟಿ ಶೃತಿ ಹರಿಹರನ್ ತಮ್ಮ ವಿರುದ್ಧ ದಾಖಲಿಸಿರುವ ಲೈಂಗಿಕ ಕಿರುಕುಳ ಸಂಬಂಧದ ಎಫ್‍ಐಆರ್ ಅನ್ನು ರದ್ದುಗೊಳಿಸಬೇಕು ಎಂದು ಬಹುಭಾಷಾ ನಟ ಅರ್ಜುನ್ ಸರ್ಜಾ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಹೈಕೋರ್ಟ್ ಹೇಳಿದೆ.
ಇಂದೇ ಅರ್ಜಿಯ ವಿಚಾರಣೆ ನಡೆಸಬೇಕು ಎಂದು ಅರ್ಜುನ್ ಸರ್ಜಾ ಪರ ವಕೀಲ ಬಿ.ವಿ.ಆಚಾರ್ಯ ಇಂದು ಹೈಕೋರ್ಟ್‍ಗೆ ಮನವಿ ಮಾಡಿದರು. ಆದರೆ ನ್ಯಾಯಮೂರ್ತಿ ಪಿ.ದಿನೇಶ್ ಕುಮಾರ್ ಶುಕ್ರವಾರ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ.

ಶ್ರುತಿ ಹರಿಹರನ್ ಪ್ರಚಾರಕ್ಕಾಗಿ ದುರುದ್ದೇಶದಿಂದ ಸುಳ್ಳು ದೂರು ದಾಖಲಿಸಿದ್ದಾರೆ.ಆದ್ದರಿಂದ ಎಫ್‍ಐಆರ್ ರದ್ದುಗೊಳಿಸಬೇಕು ಎಂದು ಅರ್ಜುನ್ ಸರ್ಜಾ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಶ್ರುತಿ ಹರಿಹರನ್ ಅವರ ಫೇಸ್ ಬುಕ್‍ನಲ್ಲಿ ಅಮೆರಿಕಾದಿಂದ ಪೆÇೀಸ್ಟ್ ಮಾಡಲಾಗಿದೆ. ಅವರು ಬೆಂಗಳೂರಿನಲ್ಲಿರಬೇಕಾದರೆ ಅಮೆರಿಕಾದಿಂದ ಪೆÇೀಸ್ಟ್ ಮಾಡಲು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದ್ದು, ತಮ್ಮ ಇ-ಮೇಲ್ , ಸಾಮಾಜಿಕ ಮಾಧ್ಯಮಗಳ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು, ಈ ಸಂಬಂಧಿತ ಎಲ್ಲಾ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುತ್ತೇವೆ ಎಂದು ಸರ್ಜಾ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ