ಇಂದು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 34ನೇ ಪುಣ್ಯ ಸ್ಮರಣೆ

ನವದೆಹಲಿ, ಅ.31-ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಇಂದಿರಾಗಾಂಧಿ ಅವರ 34ನೇ ಪುಣ್ಯಸ್ಮರಣೆಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ.
ರಾಜಧಾನಿ ನವದೆಹಲಿಯಲ್ಲಿ ನಡೆದ ಮುಖ್ಯ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಯುಪಿಎ ಅಧಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಹಾಗೂ ಕಾಂಗ್ರೆಸ್ ಮುಖಂಡರು ಇಂದಿರಾ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ ಶ್ರದ್ಧಾಂಜಲಿ ಸಮರ್ಪಿಸಿದರು.

ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಪ್ರಯುಕ್ತ ಟ್ವಟರ್‍ನಲ್ಲಿ ಸಂದೇಶವೊಂದನ್ನು ಪೆÇೀಸ್ಟ್ ಮಾಡಿರುವ ರಾಹುಲ್ ಗಾಂಧಿ, ದೇಶಕ್ಕೆ ಮತ್ತು ರಾಷ್ಟ್ರಕ್ಕೆ ಅವರು ನೀಡಿರುವ ಕೊಡುಗೆಯನ್ನು ಸ್ಮರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೂ ಕೂಡ ಟ್ವೀಟ್ ಮಾಡಿ, ಮಾಜಿ ಪ್ರಧಾನಿಗೆ ಶ್ರದ್ಧಾಂಜಲಿ ಸಮರ್ಪಿಸಿದ್ದಾರೆ.

34 ವರ್ಷಗಳ ಹಿಂದೆ ಅಂದರೆ 31ನೇ ಅಕ್ಟೋಬರ್ 1984ರಲ್ಲಿ ಸಫ್ಧರ್‍ಜಂಗ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಅಂಗರಕ್ಷಕರಾದ ಬಿಯಾಂತ್ ಸಿಂಗ್ ಮತ್ತು ಸತ್ವಂತ್ ಸಿಂಗ್ ಅವರ ಗುಂಡಿಗೆ ಇಂದಿರಾಗಾಂಧಿ ಬಲಿಯಾದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ