ಉಪಚುನಾವಣೆ: 11 ಗಂಟೆಯವರೆಗೂ ಶೇ.21.5ರಷ್ಟು ಮತದಾನ

ಬೆಂಗಳೂರು: ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಹಿನ್ನಲೆಯಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಬೆಳಗ್ಗೆ 11 ಗಂಟೆಯವರೆಗೂ ಶೇ.21.5ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ಜಮಖಂಡಿ, ರಾಮನಗರ ವಿಧಾನಸಭಾ ಕ್ಷೇತ್ರಗಳು ಹಾಗೂ ಬಳ್ಳಾರಿ, ಮಂಡ್ಯ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಈ ಪೈಕಿ ಜಮಖಂಡಿಯಲ್ಲಿ ಬೆಳಗ್ಗೆ 11 ಗಂಟೆಯವರೆಗೂ ಶೇ.22.3ರಷ್ಟು ಮತ್ತು ರಾಮನಗರದಲ್ಲಿ ಶೇ.21.5ರಷ್ಟು ಮತದಾನವಾಗಿದೆ.

ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬೆಳಗ್ಗೆ 11 ಗಂಟೆಯವರೆಗೂ ಶೇ.17.37ರಷ್ಟು ಮತದಾನವಾಗಿದ್ದು, ಬಳ್ಳಾರಿಯಲ್ಲಿ 24.58ರಷ್ಟು ಮತದಾನವಾಗಿದೆ. ಇನ್ನು ಮಂಡ್ಯ ಲೋಕಸಭಾ ವ್ಯಾಪ್ತಿಯಲ್ಲಿ ಬೆಳಗ್ಗೆ 11 ಗಂಟೆಯ ವೇಳೆಗೆ ಶೇ.13.36ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

Karntaka By electiona,Voting

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ