ಮಂಡ್ಯದಲ್ಲಿ ಮಾದರಿ ಮತಗಟ್ಟೆ: ಮತದಾರರಿಗೆ ರೆಡ್ ಕಾರ್ಪೆಟ್ ಸ್ವಾಗತ

ಮಂಡ್ಯ: ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಬಿರುಸಿನಿಂದ ಸಾಗಿದೆ. ಈ ನಡುವೆ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಈ ಬಾರಿ ಆಯೋಗ ಹಲವು ರೀತಿಯ ಕಸರತ್ತು ನಡೆಸಿದೆ. ಮಂಡ್ಯದಲ್ಲಿ ಮಾದರಿ ಮತಗಟ್ಟೆ ಸ್ಥಾಪಿಸಲಾಗಿದ್ದು, ಮತದಾರರನ್ನು ರೆಡ್‌ ಕಾರ್ಪೆಟ್‌ ಹಾಕಿ ಸ್ವಾಗತಿಸಲಾಗಿದೆ.

ಪಾಂಡವಪುರ ತಾಲೂಕಿನ ಚಿನಕುರುಳಿ ಗ್ರಾಮದ ಮತಗಟ್ಟೆಯಲ್ಲಿ ಕೆಂಪು ನೆಲಹಾಸಿಗೆ ಹೂಕುಂಡಗಳಿಂದ ಅಲಂಕಾರ ಮಾಡಲಾಗಿದ್ದು, ಮತದಾರರನ್ನು ಸೆಳೆಯಲಾಗುತ್ತಿದೆ.

ವಿಕಲಾಂಗರಿಗಾಗಿ ವ್ಹೀಲ್ ಚೇರ್ ಮತ್ತು ಮಾಹಿತಿ ಕೇಂದ್ರದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ. ಮತಗಟ್ಟೆ ಹೊರಗೆ ಮತದಾನದ ಜಾಗೃತಿ ಸಂದೇಶಗಳನ್ನು ಅಳವಡಿಸಲಾಗಿದೆ.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾಗಿರುವ ಮತಗಟ್ಟೆ ಸಂಖ್ಯೆ 128, 129, 130, 131 ಗಳಲ್ಲಿ ಮತದಾರರನ್ನು ವಿಶೇಷವಾಗಿ ಸ್ವಾಗತಿಸಲಾಗುತ್ತಿದೆ.

By Electiona,Mandya,Red Corpet,Voters

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ