ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಆಸ್ಪತ್ರೆ ಸಿಂಬದ್ದಿಂಯಿಂದಲೇ ಗ್ಯಾಂಗ್ ರೇಪ್

ಲಖನೌ:ನ-4: ಆಸ್ಪತ್ರೆಯ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಆಸ್ಪತ್ರೆ ಸಿಬ್ಬಂದಿಯೇ ಗ್ಯಾಂಗ್ ರೇಪ್ ನಡೆಸಿರುವ ಕೃತ್ಯ ಉತ್ತರ ಪ್ರದೇಶದಲ್ಲಿ ನಡೆದಿದೆ.

ಆಸ್ಪತ್ರೆಯ ಸಿಬ್ಬಂದಿ ಹಾಗೂ ಇನ್ನೂ ನಾಲ್ವರು ಸೇರಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದು, ಜನರಲ್ ವಾರ್ಡ್ ಗೆ ಸ್ಥಳಾಂತರಿಸಿದ ಬಳಿಕ ಸಂತ್ರಸ್ತೆ ಈ ಘಟನೆಯನ್ನು ವಿವರಿಸಿದ್ದಾಳೆ.

ಬಾಲಕಿಗೆ ಹಾವು ಕಚ್ಚಿದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಐಸಿಯುಗೆ ದಾಖಲಿಸಿ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚೇತರಿಕೆ ಕಂಡುಬಂದ ಬಳಿಕ ಆಕೆಯನ್ನು ಜನರಲ್ ವಾರ್ಡ್ ಗೆ ಸ್ಥಳಾಂತರಿಸಲಾಯಿತು. ಜನರಲ್ ವಾರ್ಡ್ ಗೆ ಸ್ಥಳಾಂತರಗೊಂಡ ಬಳಿಕ ಐಸಿಯುನಲ್ಲಿ ತನ್ನ ಮೇಲೆ ನಡೆದ ಘಟನೆ ಬಗ್ಗೆ ಮಾಹಿತಿ ನೀಡಿದ್ದಾಳೆ. ಈ ಕುರಿತು ಕುಟುಂಬ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆಸ್ಪತ್ರೆಯ ಸಿಬ್ಬಂದಿ ಹಾಗೂ ಅನಾಮಿಕ ನಾಲ್ವರು ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಿದ್ದಾರೆ.

uttar pradesh,minor girl gang raped,hospital

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ