ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಆಡ್ವಾಣಿಗೆ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಿ ಶುಭಾಷಯ

ನವದೆಹಲಿ: ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಆಡ್ವಾಣಿ ಅವರಿಗೆ ಇಂದು 91ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನಲೆಯಲ್ಲಿ ಹಿರಿಯ ನಾಯಕ ಅಡ್ವಾಣಿಗೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.

ಟ್ವೀಟ್ ಮೂಲಕ ಶುಭ ಕೋರಿರುವ ಪ್ರಧಾನಿ ಮೋದಿ, ಭಾರತೀಯ ರಾಜಕಾರಣದಲ್ಲಿ ಎಲ್‌ ಕೆ ಅಡ್ವಾಣಿ ಅವರ ಪ್ರಭಾವ ಅಪಾರವಾದುದು. ಯಾವುದೇ ಸ್ವಾರ್ಥವಿಲ್ಲದೆ ಮತ್ತು ಶ್ರದ್ಧೆಯಿಂದ ಅವರು ಬಿಜೆಪಿ ಪಕ್ಷವನ್ನು ಕಟ್ಟಿದ್ದಾರೆ. ಕಾರ್ಯಕರ್ತರನ್ನು ಅದ್ಭುತವಾಗಿ ಹುರಿದುಂಬಿಸಿದ ಕೀರ್ತಿ ಅವರದ್ದು. ನಮ್ಮ ಪ್ರೀತಿಯ ಅಡ್ವಾಣಿ ಅವರಿಗೆ ದೇವರು ಒಳ್ಳೆಯ ಆರೋಗ್ಯ ಮತ್ತು ದೀರ್ಘಾವಧಿಯ ಜೀವನವನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಇದೇ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಷಾ ಕೂಡ ಅಡ್ವಾಣಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಇನ್ನು ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ರಾಜ್ ವರ್ಧನ್ ಸಿಂಗ್ ರಾತೋಡ್ ಸೇರಿದಂತೆ ಬಿಜೆಪಿ ಹಲವು ನಾಯಕರು ಕೂಡ ಅಡ್ವಾಣಿ ಅವರಿಗೆ ಶುಭಾಶಯ ತಿಳಿಸಿದ್ದಾರೆ.

LK Advani, Birthday, PM Modi, wishes.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ