ಟಿಪ್ಪು ಸುಲ್ತಾನ್ ಗಿಂತ ಸಿದ್ದರಾಮಯ್ಯ ದೊಡ್ಡ ಮತಾಂಧ: ನಳಿನ್ ಕುಮಾರ್

ಮಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುತ್ತಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ದಕ್ಷಿಣ ಕನ್ನಡ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್, ಟಿಪ್ಪು ಸುಲ್ತಾನ್ ಗಿಂತ ಸಿದ್ದರಾಮಯ್ಯ ದೊಡ್ಡ ಮತಾಂಧ. ಹೀಗಾಗಿ ಟಿಪ್ಪು ಜಯಂತಿ ಬದಲು ಸಿದ್ದರಾಮಯ್ಯ ಜಯಂತಿ ಆಚರಿಸುವುದು ಒಳಿತು ಎಂದು ವ್ಯಂಗ್ಯವಾಡಿದ್ದಾರೆ.

ಶುಕ್ರವಾರ ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಸಲ್ಮಾನರಿಗೆ ಬೇಡದ ಇಸ್ಲಾಂ ವಿರೋಧಿ ಟಿಪ್ಪು ಸುಲ್ತಾನ್. ಇಂತಹ ಟಿಪ್ಪು ಜಯಂತಿಯನ್ನು ಆಚರಿಸಿದ್ದು ಸಿದ್ದರಾಮಯ್ಯ.ಈ ನಿಟ್ಟಿನಲ್ಲಿ ತಾನೊಬ್ಬ ಮುಸಲ್ಮಾನ ಮೌಲ್ವಿ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

ಇದೀಗ ಸಿದ್ದರಾಮಯ್ಯ ದಾರಿಯಲ್ಲೇ ಎಚ್ ಡಿ ಕುಮಾರಸ್ವಾಮಿ ಹೊರಟಿದ್ದಾರೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಟಿಪ್ಪು ಜಯಂತಿ ಬದಲು ಸಿದ್ದರಾಮಯ್ಯ ಜಯಂತಿ ಆಚರಿಸುವುದು ಒಳ್ಳೆಯದು ಎಂದು ಟೀಕಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ