ಅನಂತ ಕುಮಾರ್ ಅವರಿಗೆ ಪ್ರಧಾನಿ ಮೋದಿ ಅಂತಿಮ ನಮನ

ಬೆಂಗಳೂರು: ಅನಾರೋಗ್ಯದಿಂದ ನಿಧನರಾದ ಕೇಂದ್ರ ಸಚಿವ ಅನಂತ ಕುಮಾರ್‌ ಅವರ ಪಾರ್ಥೀವ ಶರೀರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಅಂತಿಮ ನಮನ ಸಲ್ಲಿಸಿದರು.

ವಿಶೇಷ ವಿಮಾನದ ಮೂಲಕ ಇಂದು ರಾತ್ರಿ 8.30ರ ಸುಮಾರಿಗೆ ವಾರಾಣಾಸಿಯಿಂದ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ, ನೇರವಾಗಿ ಬಸವನಗುಡಿಯಲ್ಲಿರುವ ಅನಂತ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

ಬಳಿಕ ಅನಂತ್ ಕುಮಾರ್ ಅವರ ಕುಟುಂಬಕ್ಕೆ ಪ್ರಧಾನಿ ಮೋದಿ ಸಾಂತ್ವನ ಹೇಳಿದರು. ನಂತರ ನವದೆಹಲಿಗೆ ವಾಪಸಾಗಿದ್ದಾರೆ.

ನಾಳೆ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬೆಂಗಳೂರಿಗೆ ಆಗಮಿಸಿ ಅನಂತ್ ಕುಮಾರ್ ಅವರಿಗೆ ಅಂತಿಮ ನಮನ ಸಲ್ಲಿಸುವ ಸಾಧ್ಯತೆ ಇದೆ.

PM Modi pays tribute,Union Minister Anant kumar,Bangalore

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ