ಕೇಂದ್ರ ಸರ್ಕಾರಕ್ಕೆ ದೇಶದ ರೈತರ ಸಮಸ್ಯೆಗಳಿಗಿಂತ ರಾಮ ಮಂದಿರ ನಿರ್ಮಾಣವೆ ಪ್ರಮುಖವಾಗಿದೆ : ನ್ ಸಿಪಿ ಮುಖ್ಯಸ್ಥ ಶರದ್ ಪವಾರ್

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ದೇಶದ ರೈತರ ಸಮಸ್ಯೆಗಳಿಗಿಂತ ರಾಮ ಮಂದಿರ ನಿರ್ಮಾಣವೆ ಪ್ರಮುಖದ್ದಾಗಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರ ರೈತರನ್ನು ನಿರ್ಲಕ್ಷ್ಯಿಸುತ್ತಿದೆ. ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಂದಾಗುತ್ತಿಲ್ಲ. ರಾಮ ಮಂದಿರ ನಿರ್ಮಾಣ ವಿಚಾರವೇ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಮಹತ್ವದ್ದಾಗಿದೆ ಎಂದಿದ್ದಾರೆ.

ರೈತರ ಸಾಲಮನ್ನಾ ಮಾಡುವುದು ಸೇರಿದಂತೆ ಸರ್ಕಾರ ಯಾವುದೇ ಸೂಕ್ತ ಯೋಜನೆ ಜಾರಿಗೆ ತಂದಿಲ್ಲ ರೈತರ ಜ್ವಲಂತ ಸಮಸ್ಯೆಗಳನ್ನು ಚರ್ಚಿಸುತ್ತಿಲ್ಲ, ಅದರ ಬದಲು ದೇಶದ ಜನತೆಯ ಗಮನವನ್ನು ಬೇರೆಡೆ ಸೆಳೆಯುವ ಯತ್ನ ನಡೆಸುತ್ತಿದೆ. ಸರ್ಕಾರದ ಈ ನಡೆ ಸರಿಯಲ್ಲ ಎಂದು ಗುದುಗಿದ್ದಾರೆ.

NCP,Sharad pawar,PM Modi

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ