ಮರಾಠಾ ಪ್ರತಿಭಟನೆಗೆ ಮಣಿದ ಮಹಾ ಸರ್ಕಾರ

ಅಹ್ಮದ್‌ನಗರ: ಶೇ. 16ರಷ್ಟು ಮೀಸಲಾತಿಗೆ ಆಗ್ರಹಿಸಿ ಮರಾಠ ಸಮುದಾಯ ನಡೆಸುತ್ತಿದ್ದ ಪ್ರತಿಭಟನೆಗೆ ಕೊನೆಗೂ ಸರ್ಕಾರ ಮಣಿದಿದ್ದು, ಡಿ. 1 ರಿಂದ ಜಾರಿಗೆ ಬರುವಂತೆ ಸರ್ಕಾರಿ ಉದ್ಯೋಗ ಮತ್ತು ಶೈಕ್ಷಣಿಕ ವಲಯದಲ್ಲಿ ಮೀಸಲಾತಿ ನೀಡಲಾಗುತ್ತದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ತಿಳಿಸಿದ್ದಾರೆ.

ಮಹಾರಾಷ್ಟ್ರ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ವರದಿಯನ್ನು ಸ್ವೀಕರಿಸಿದ ನಂತರ ಸರ್ಕಾರ ಮೀಸಲಾತಿ ನೀಡುವ ನಿರ್ಧಾರಕ್ಕೆ ಬಂದಿದೆ. ಹಿಂದುಳಿದ ವರ್ಗಗಳ 25 ವಿಭಾಗಗಳ ಅಡಿಯಲ್ಲಿ ಮರಾಠರು ಬರುತ್ತಾರೆ ಎಂದು ಹೇಳಿದೆ.

ಮುಖ್ಯಮಂತ್ರಿ ಫಡ್ನವೀಸ್‌ ರ‍್ಯಾಲಿಯಲ್ಲಿ ಮಾತನಾಡಿ, ಮರಾಠ ಮೀಸಲಾತಿ ಕುರಿತು ವರದಿ ಸ್ವೀಕರಿಸಿರುವುದು ಒಳ್ಳೆಯ ವಿಚಾರ. ಈ ಸಂಬಂಧ ಕಾನೂನಾತ್ಮಕ ಕ್ರಮಗಳನ್ನು ಮುಗಿಸುತ್ತೇವೆ. ನಂತರ ಮರಾಠ ಮೀಸಲಾತಿಯನ್ನು ಘೋಷಿಸುತ್ತೇವೆ. ಮೀಸಲಾತಿಗಾಗಿ ಒತ್ತಾಯಿಸಿ ಮಾಡುತ್ತಿರುವ ಪ್ರತಿಭಟನೆಯನ್ನು ನಿಲ್ಲಿಸುವಂತೆ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.

Maharashtra, CM Devendra Fadnavis,Maratha Quota

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ