ರಾಜಸ್ಥಾನ: ನಾಲ್ವರು ಸಚಿವರು ಸೇರಿ 43 ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ನಿರಾಕರಣೆ

ಜೈಪುರ್: ರಾಜಸ್ಥಾನದಲ್ಲಿ ಬಿಜೆಪಿ ನಾಲ್ವರು ಸಚಿವರು ಸೇರಿದಂತೆ 43 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ್ದು, ಟಿಕೆಟ್ ವಂಚಿತ ಹಲವು ಶಾಸಕರು ಬೇರೆ ಪಕ್ಷದತ್ತ ಮುಖಮಾಡಿದ್ದಾರೆ.

200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಗೆ ಡಿಸೆಂಬರ್ 7ರಂದು ಚುನಾವಣೆ ನಡೆಯುತ್ತಿದ್ದು, ಆಡಳಿತರೂಢ ಬಿಜೆಪಿ ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಮತ್ತು ಎರಡನೇ ಪಟ್ಟಿಯಲ್ಲಿ ನಾಲ್ವರು ಸಚಿವರು ಸೇರಿದಂತೆ 43 ಹಾಲಿ ಶಾಸಕರಿಗೆ ಬಿಜೆಪಿ ಕೊಕ್ ನೀಡಿದ್ದು, ರಾಜಸ್ಥಾನ ಬಿಜೆಪಿಯಲ್ಲಿ ಭಿನ್ನಮತ ಆರಮ್ಭವಾಗಿದೆ.

ಮೊದಲ ಪಟ್ಟಿಯಲ್ಲಿ ಐದು ಬಾರಿ ಶಾಸಕರಾಗಿದ್ದ ಮಾಜಿ ಸಚಿವ ಸುರೇಂದ್ರ ಗೋಯಲ್ ಅವರಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅವರು ಈಗಾಗಲೇ ಕಾಂಗ್ರೆಸ್ ಸೇರಿದ್ದು, ಹಲವು ಶಾಸಕರು ಅವರ ದಾರಿಯನ್ನೇ ತುಳಿಯುವ ಸಾಧ್ಯತೆ ಇದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ