2022 ಕ್ಕೆ ಭಾರತದಲ್ಲಿ ಜಿ-20 ಶೃಂಗಸಭೆ: ಪ್ರಧಾನಿ ಮೋದಿ

ಅರ್ಜೆಂಟೀನಾ: ಜಿ-20 ಶೃಂಗಸಭೆಯನ್ನು 2022 ಕ್ಕೆ ಭಾರತದಲ್ಲಿ ಆಯೋಜಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಅರ್ಜೆಂಟೀನಾದ ರಾಜಧಾನಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತ 2022 ರ ವೇಳೆಗೆ 75 ನೇ ವರ್ಷದ ಸ್ವಾತಂತ್ರ್ಯ ದಿನವನ್ನು ಆಚರಿಸಲಿದೆ, ಈ ಮಹತ್ವದ ಸಂದರ್ಭದಲ್ಲಿ ಭಾರತ ಜಿ-20 ಶೃಂಗಸಭೆಯನ್ನು ಆಯೋಜಿಸಲು ಉತ್ಸುಕವಾಗಿದೆ. ವಿಶ್ವದ ಅತಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿರುವ ಭಾರತಕ್ಕೆ ಎಲ್ಲರೂ ಆಗಮಿಸುವಂತೆ ಜಿ-20 ರಾಷ್ಟ್ರ ನಾಯಕರನ್ನು ಪ್ರಧಾನಿ ಆಹ್ವಾನಿಸಿದರು.

ಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಯುರೋಪಿಯನ್ ಯೂನಿಯನ್, ಫ್ರಾನ್ಸ್, ಜರ್ಮನಿ, ಭಾರತ, ಇಂಡೋನೇಷ್ಯಾ, ಇಟಲಿ, ಜಪಾನ್, ಮೆಕ್ಸಿಕೊ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ದಕ್ಷಿಣ ಕೊರಿಯಾ, ಟರ್ಕಿ, ಯುಕೆ ಮತ್ತು ಯುಎಸ್ ರಾಷ್ಟ್ರಗಳು ಜಿ-20 ಸದಸ್ಯರಾಗಿದ್ದು, ವಿಶ್ವದ ಶೇ.80 ರಷ್ಟು ಜಿಡಿಪಿಯನ್ನು ಹೊಂದಿವೆ.

India To Host G20 Summit In 2022, 75th Year Of Independence,PM Modi

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ