ಬಿಜೆಪಿಯಿಂದ ಸರ್ಕಾರದ ಅಸ್ಥಿರ ಅಸಾಧ್ಯ : ಸಿ.ಎಂ ಕುಮಾರಸ್ವಾಮಿ

ಬೆಂಗಳೂರು, ಡಿ.3- ಬಿಜೆಪಿ ಏನೇ ಮಾಡಿದರೂ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು.
ಮಲ್ಲೇಶ್ವರದ ಕಾಡು ಮಲ್ಲೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಸಮ್ಮಿಶ್ರ ಸರ್ಕಾರ ಸುಗಮವಾಗಿ ಆಡಳಿತ ನಡೆಸುತ್ತಿದೆ. ಆದರೂ ವಿರೋಧ ಪಕ್ಷವಾದ ಬಿಜೆಪಿ ನಾನಾ ರೀತಿ ಕಸರತ್ತು ಮಾಡುತ್ತಿದೆ.ಏನೇ ಆದರೂ ಫಲ ನೀಡುವುದಿಲ್ಲ ಕಾದು ನೋಡಿ ಎಂದರು.
ಕಡೆ ಕಾರ್ತೀಕ ಸೋಮವಾರವಾದ ಇಂದು ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಬೇಕಿತ್ತು.ಆದರೆ ಪೂರ್ವ ನಿಗದಿತ ಕಾರ್ಯಕ್ರಮ ಇದ್ದುದರಿಂದ ಅಲ್ಲಿಗೆ ತೆರಳಲು ಸಾಧ್ಯವಾಗಿಲ್ಲ. ಆದ್ದರಿಂದ ಇಂದು ಕಾಡು ಮಲ್ಲೇಶ್ವರ ದೇವಾಲಯಕ್ಕೆ ಆಗಮಿಸಿ ನಾಡಿನ ಜನರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ