ಮನೆ ಕಳ್ಳತನ ಮಾಡುತ್ತಿದ್ದ ಕಳ್ಳನ ಬಂಧನ

ಕೆಜಿಎಫ್, ಡಿ.11- ಕೆಜಿಎಫ್ ಉಪ ವಿಭಾಗದಲ್ಲಿಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತ್ತಿದ್ದವನನ್ನು ಬಂಧಿಸಿ, ಆತನಿಂದ ಸುಮಾರು 1.35 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆಂಡರಸನ್ ಪೇಟೆಯ ಜನತಾ ಕಾಲೋನಿಯ ನಿವಾಸಿ ರವಿ ಬಂಧಿತ ಆರೋಪಿ.

ಕಳ್ಳನ ಪತ್ತೆಗಾಗಿ ಸರ್ಕಲ್ ಇನ್ಸ್‍ಪೆಕ್ಟರ್ ಸೂರ್ಯಪ್ರಕಾಶ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ರಮೇಶ್,ಗಜೇಂದ್ರ, ಬಿ.ವಿ.ವೆಂಕಟೇಶಪ್ಪ, ಶ್ರೀನಿವಾಸ್, ಚಂದ್ರಶೇಖರ್, ಸುನಿಲ್ ಕುಮಾರ್ ಮತ್ತು ಮಹೇಂದ್ರ ಕುಮಾರ್ ಅವರನ್ನು ಒಳಗೊಂಡು ತಂಡವನ್ನು ರಚಿಸಲಾಗಿತ್ತು. ಪ್ರಕರಣದ ತನಿಖೆ ಮುಂದುವರೆದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ