ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಟಿಆರ್ ಎಸ್ ಮುಖ್ಯಸ್ಥ ಕೆ ಚಂದ್ರಶೇಖರ ರಾವ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಬಗ್ಗೆ ಟಿಆರ್ ಎಸ್ ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಇದೇ ಗುರುವಾರ ಟಿಆರ್ ಎಸ್ ಅಧಿನಾಯಕ ಕೆ ಚಂದ್ರಶೇಖರ ರಾವ್ ಅವರು 2ನೇ ಬಾರಿಗೆ ತೆಲಂಗಾಣ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೆಸಿಆರ್ ನೇತೃತ್ವದ ಟಿಆರ್ಎಸ್ 88 ಸ್ಥಾನಗಳನ್ನು ಗೆದ್ದಿದೆ.
ಮಂಗಳವಾರ ಪ್ರಕಟವಾದ ಚುನಾವಣಾ ಫಲಿತಾಂಶದಲ್ಲಿ ಟಿಆರ್ ಎಸ್ ಪ್ರಚಂಡ ಜಯ ಸಾಧಿಸಿತ್ತು. ಕೆಸಿಆರ್ ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅವರು ಗುರುವಾರಕ್ಕೆ ಪ್ರಮಾಣವಚನವನ್ನು ಮುಂದೂಡಿದ್ದಾರೆ ಎಂದು ಹೇಳಲಾಗಿದೆ.
TRS chief, K Chandrashekar Rao, take oath as Telangana CM tomorrow