ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ ರಾಜ್ಯಗಳಲ್ಲಿ ಶೀಘ್ರ ರೈತರ ಸಾಲಮನ್ನಾ: ಕಾಂಗ್ರೆಸ್

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಜಯಗಳಿಸಿರುವ ಕಾಂಗ್ರೆಸ್, ಅಧಿಕಾರದ ಗದ್ದುಗೆಯೇರುತ್ತಿದ್ದಂತೆಯೇ ಮೂರು ರಾಜ್ಯಗಳಲ್ಲಿ ರೈತರಿಗೆ ಬಂಪರ್ ಕೊಡುಗೆ ನೀಡುವುದಾಗಿ ಘೋಷಿಸಿದೆ.

ಛತ್ತೀಸ್​ಗಢ, ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಶೀಘ್ರದಲ್ಲಿ ರೈತರ ಸಾಲ ಮನ್ನಾ ಮಾಡುವುದು ನಿಶ್ಚಿತ ಎಂದು ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ 10 ದಿನಗಳೊಳಗೆ ರೈತರ ಸಾಲಮನ್ನಾ ಮಾಡುವುದಾಗಿ ರಾಹುಲ್ ಗಾಂಧಿ ಪ್ರಚಾರದ ವೇಳೆ ಭರವಸೆ ನೀಡಿದ್ದರು. ಇದಕ್ಕೆ ಬದ್ಧರಿರುವುದಾಗಿ ಹೇಳಿದ ಅವರು, ಶೀಘ್ರದಲ್ಲಿಯೇ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದಾರೆ.

ರೈತರ ಸಾಲ ಮನ್ನಾ ಮಾಡುವ ಭರವಸೆಯನ್ನೂ ಒಂದು ಅಸ್ತ್ರವಾಗಿ ಬಳಸಿಕೊಂಡು ಕಾಂಗ್ರೆಸ್​ ಮತಯಾಚನೆ ಮಾಡಿತ್ತು. ಈಗ ಮೂರು ರಾಜ್ಯಗಳಲ್ಲಿ ಜಯಗಳಿಸಿರುವ ಕಾಂಗ್ರೆಸ್ ರೈತರ ಸಾಲಮನ್ನಾ ಭರವಸೆ ಈಡೇರಿಸುವುದೇ ಕಾದುನೋಡಬೇಕಿದೆ.

Farmer Loans,Waived,madhyapradesh,rajastan,Chhattishghar, Rahul Gandhi

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ