ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಮೂವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಮೂವರು ಉಗ್ರರನ್ನು ಸದೆಬಡಿದಿದೆ. ಉಗ್ರರು ಹಾಗೂ ಭದ್ರತಾಪಡೆಗಾ ನಡಿವಿನ ಗುಂಡಿನ ಕಾಳದ ವೇಳೆ ಇಬ್ಬರು ನಾಗರಿಕರೂ ಹತರಾಗಿದ್ದಾರೆ

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಸಿರ್ನೂ ಗ್ರಾಮದಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಪಡೆದ ಸೇನಾಧಿಕಾರಿಗಳು ತುರ್ತು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನು ಸೈನಿಕರು ಹತ್ಯೆಗೈದಿದ್ದಾರೆ.

ಅಂತೆಯೇ ಘಟನೆಯಲ್ಲಿ ಇಬ್ಬರು ನಾಗರಿಕರು ಸಾವನ್ನಪ್ಪಿದ್ದು, ಸಾವನ್ನಪ್ಪಿದ ನಾಗರಿಕರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಸೇನೆ ತಮ್ಮನ್ನು ಸುತ್ತುವರೆಯುತ್ತಿದ್ದಂತೆಯೇ ಭಯಭೀತ ಗೊಂಡ ಉಗ್ರರು ಏಕಾಏಕಿ ಸೈನಿಕರತ್ತ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಸೈನಿಕರು ನಡೆಸಿದ ಪ್ರತಿದಾಳಿಯಲ್ಲಿ ಉಗ್ರರು ಹತರಾಗಿದ್ದಾರೆ. ಘಟನಾ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ.

Jammu and Kashmir, hree terrorists killed,indian army

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ