ಮುಂಬೈ: ಸರ್ಕಾರಿ ಆಸ್ಪತ್ರೆಗೆ ಬೆಂಕಿ: 6 ಮಂದಿ ಸಾವು

ಮುಂಬೈ: ಅಂಧೇರಿ ಹೊರವಲಯದ ಮರೋಲ್‌ನಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.

ಆಸ್ಪತ್ರೆಗೆ ಬಂದಿದ್ದ 100ಕ್ಕೂ ಹೆಚ್ಚು ರೋಗಿಗಳಿಗೆ ಗಾಯಗಳಾಗಿವೆ. ಐದು ಅಂತಸ್ತಿನ ಕಟ್ಟಡದ 4ನೇ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ಈ ವೇಳೆ ರೋಗಿಗಳು ಸೇರಿದಂತೆ 108 ಮಂದಿ ಸಿಲುಕಿಕೊಂಡಿದ್ದರು. ಬಳಿಕ ಅವರನ್ನು ಅ‌ಗ್ನಿಶಾಮಕ ಸಿಬ್ಬಂದಿ ಏಣಿ ಬಳಸಿ ರಕ್ಷಿಸಿದರು ಎಂದು ಬೃಹನ್‌ ಮುಂಬೈ ಮುನ್ಸಿಪಲ್‌ ಕಾರ್ಪೊರೇಷನ್‌ನ ವಿಪತ್ತು ನಿರ್ವಹಣಾ ಘಟಕದ ಅಧಿಕಾರಿ ತಿಳಿಸಿದ್ದಾರೆ.

ಬೆಂಕಿಗೆ ನಿಖರ ಕಾರಣ ತಿಳಿದುಬಂದಿಲ್ಲ.

mumai,hospital,fire

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ