ರಾಜಸ್ಥಾನದಲ್ಲಿಯೂ ರೈತರ ಸಾಲಮನ್ನಾ ಮಾಡುವುದಾಗಿ ಕಾಂಗ್ರೇಸ್ ಘೋಷಣೆ

ನವದೆಹಲಿ/ಜೈಪುರ, ಡಿ.20- ಚುನಾವಣಾ ಪ್ರಚಾರದ ವೇಳೆ ನೀಡಲಾಗಿದ್ದ ಭರವಸೆಯಂತೆಯೇ ಕಾಂಗ್ರೆಸ್ ನಡೆಯುತ್ತಿದ್ದು, ಇದರಂತೆ ಮಧ್ಯಪ್ರದೇಶ ಹಾಗೂ ಛತ್ತೀಸ್‍ಗಢ ರಾಜ್ಯಗಳಲ್ಲಿ ರೈತರ ಸಾಲಮನ್ನಾ ಮಾಡಿದ್ದ ಕಾಂಗ್ರೆಸ್ ಇದೀಗ ರಾಜಸ್ಥಾನದಲ್ಲಿಯೂ ರೈತರ ಸಾಲಮನ್ನಾ ಮಾಡಿರುವುದಾಗಿ ಘೋಷಣೆ ಮಾಡಿದೆ.

ರಾಜಸ್ಥಾನದಲ್ಲಿ ರೈತರ ಸಾಲಮನ್ನಾ ಮಾಡಿರುವ ಕುರಿತಂತೆ ಸ್ವತಃ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರೇ ಸಾಮಾಜಿಕ ಜಾಲತಾಣ ಟ್ವಿಟರ್‍ನಲ್ಲಿ ಟ್ವೀಟ್ ಮಾಡಿದ್ದಾರೆ.

ಇಟ್ಸ್‍ಡನ್ ( ನಾವು ಮಾಡಿದೆವು). ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್‍ಗಢ ರಾಜ್ಯಗಳಲ್ಲಿ ರೈತರ ಸಾಲಮನ್ನಾ ಮಾಡಿದ್ದೇವೆ. ಸಾಲಮನ್ನಾ ಮಾಡಲು ನಾವು 10 ದಿನಗಳ ಕಾಲಾವಕಾಶ ಕೇಳಿದ್ದೆವು. ಆದರೆ, ಎರಡು ದಿನಗಳಲ್ಲಿಯೇ ಸಾಲಮನ್ನಾ ಮಾಡಿದ್ದೇವೆಂದು ಹೇಳಿದ್ದಾರೆ.

ಈ ಹಿಂದೆ ಅಶೋಕ್ ಗೆಲ್ಹೋಟ್ ನೇತೃತ್ವದ ಸರ್ಕಾರ ಸಾಲಮನ್ನಾ ಮಾಡಲು 10 ದಿನಗಳ ಕಾಲಾವಕಾಶ ಕೇಳಿತ್ತು. ರೈತರ 2 ಲಕ್ಷ ರೂ.ವರೆಗಿನ ಸಾಲವನ್ನು ಸರ್ಕಾರ ಮನ್ನಾ ಮಾಡಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ