ಮಾಡಲು ಕೆಲಸವಿಲ್ಲದ ಬಿಜೆಪಿಯವರು ಇಲ್ಲ ಸಲ್ಲದ ಭ್ರಮೆ ಹುಟ್ಟಿಸುತ್ತಿದ್ದಾರೆ, ಕೆಪಿಸಿಸಿ ಅದ್ಯಕ್ಷ ಗುಂಡುರಾವ್

ಬೆಂಗಳೂರು, ಡಿ.25- ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಹಾಗಾಗಿ ಏನು ಇಲ್ಲದೇ ಇದ್ದರೂ ಏನೋ ಇದೆ ಎಂಬ ಭ್ರಮೆ ಹುಟ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಲೇವಡಿ ಮಾಡಿದ್ದಾರೆ.

ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಅವರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಂಪುಟ ಪುನಾರಚನೆ ನಂತರ ಯಾರಿಗೂ ಅಸಮಾಧಾನವಾಗಿಲ್ಲ. ಸಣ್ಣಪುಟ್ಟ ವ್ಯತ್ಯಾಸಗಳಾಗಿದ್ದರೂ ಅದನ್ನು ಸರಿಪಡಿಸಿಕೊಳ್ಳುತ್ತೇವೆ. ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಹೇಳಿದರು.

ಬಿಜೆಪಿಯವರಿಗೆ ಕೆಲಸ ಇಲ್ಲ. ಹಾಗಾಗಿ ಕಾಂಗ್ರೆಸ್ ನಾಯಕರ ಮನೆಗೆ ಭೇಟಿ ಮಾಡಿ ಊಹಾಪೋಹಗಳನ್ನು ಹರಡುವ ಪ್ರಯತ್ನ ಮಾಡುತ್ತಿದ್ದಾರೆ. ಅದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಸರ್ಕಾರ ಸುಭದ್ರವಾಗಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ